ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, [QE][QS2]ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. [QE][QS]ದುಷ್ಟರು ನನ್ನ ಮುಂದೆ ಇರುವಾಗ [QE][QS2]ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” [QE][QS2]ಎಂದು ತೀರ್ಮಾನಿಸಿಕೊಂಡೆನು. [QE]
2. [QS]ಆದ್ದರಿಂದ ನಾನು ಮೌನವಾಗಿದ್ದೆನು. [QE][QS2]ಒಳ್ಳೆಯದನ್ನು ಸಹ ನಾನು ಆಡದೆ ಸುಮ್ಮನಿದ್ದೆನು. [QE][QS]ಆದರೆ ನನ್ನ ವ್ಯಥೆಯು ಅಧಿಕವಾಯಿತು. [QE]
2. [QS2]ನನ್ನ ಹೃದಯವು ಸಂತಾಪದಿಂದ ಕಾವೇರಿತು. [QE][QS]ನಾನು ಧ್ಯಾನವು ಬೆಂಕಿಯಂತೆ ಉರಿಯಿತು. [QE][QS2]ಕೊನೆಗೆ ನಾನು ಬಾಯಿಬಿಟ್ಟು ಮಾತನಾಡಿದೆನು: [QE][PBR]
4. [QS]“ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ [QE][QS2]ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ, [QE][QS2]ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ. [QE]
5. [QS]ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. [QE][QS2]ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; [QE][QS]ಪ್ರತಿ ಮನುಷ್ಯನ ಜೀವನ [QE][QS2]ಬರೀ ಉಸಿರೇ. [QE][PBR]
6. [QS]“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; [QE][QS2]ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; [QE][QS2]ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು. [QE][PBR]
7. [QS]“ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು? [QE][QS2]ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ. [QE]
8. [QS]ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ; [QE][QS2]ಬುದ್ಧಿಹೀನನ ನಿಂದೆಗೆ ನನ್ನನ್ನು ಪರಿಹಾಸ್ಯ ಮಾಡಬೇಡಿರಿ. [QE]
9. [QS]ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; [QE][QS2]ಇದನ್ನು ಮಾಡಿದವರು ನೀವೇ. [QE]
10. [QS]ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; [QE][QS2]ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ. [QE]
11. [QS]ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ [QE][QS2]ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. [QE][QS2]ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ. [QE][PBR]
12. [QS]“ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; [QE][QS2]ನನ್ನ ಮೊರೆಗೆ ಕಿವಿಗೊಡಿರಿ; [QE][QS2]ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; [QE][QS]ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; [QE][QS2]ನಾನೂ ಪ್ರವಾಸಿಯಾಗಿದ್ದೇನೆ. [QE]
13. [QS]ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ [QE][QS2]ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ.” [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 39 / 150
1 “ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು. 2 ಆದ್ದರಿಂದ ನಾನು ಮೌನವಾಗಿದ್ದೆನು. ಒಳ್ಳೆಯದನ್ನು ಸಹ ನಾನು ಆಡದೆ ಸುಮ್ಮನಿದ್ದೆನು. ಆದರೆ ನನ್ನ ವ್ಯಥೆಯು ಅಧಿಕವಾಯಿತು. 2 ನನ್ನ ಹೃದಯವು ಸಂತಾಪದಿಂದ ಕಾವೇರಿತು. ನಾನು ಧ್ಯಾನವು ಬೆಂಕಿಯಂತೆ ಉರಿಯಿತು. ಕೊನೆಗೆ ನಾನು ಬಾಯಿಬಿಟ್ಟು ಮಾತನಾಡಿದೆನು: 4 “ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ, ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ. 5 ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ. 6 “ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು. 7 “ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು? ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ. 8 ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ; ಬುದ್ಧಿಹೀನನ ನಿಂದೆಗೆ ನನ್ನನ್ನು ಪರಿಹಾಸ್ಯ ಮಾಡಬೇಡಿರಿ. 9 ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ. 10 ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ. 11 ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ. 12 “ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಗೆ ಕಿವಿಗೊಡಿರಿ; ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; ನಾನೂ ಪ್ರವಾಸಿಯಾಗಿದ್ದೇನೆ. 13 ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ.”
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 39 / 150
×

Alert

×

Kannada Letters Keypad References