ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; [QE][QS2]ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ. [QE]
2. [QS]ಆದ್ದರಿಂದ ಭೂಮಿಯು ಕಂಪಿಸಿದರೂ [QE][QS2]ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ, [QE]
3. [QS]ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ, [QE][QS2]ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. [QE][PBR]
4. [QS]ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ [QE][QS2]ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ. [QE]
5. [QS]ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; [QE][QS2]ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು. [QE]
6. [QS]ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. [QE][QS2]ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ. [QE][PBR]
7. [QS]ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. [QE][QS2]ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ. [QE][PBR]
8. [QS]ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. [QE][QS2]ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ. [QE]
9. [QS]ದೇವರು ಯುದ್ಧಗಳನ್ನು ಭೂಮಿಯ [QE][QS2]ಅಂತ್ಯದವರೆಗೆ ನಿಲ್ಲಿಸುತ್ತಾರೆ. [QE][QS]ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. [QE][QS2]ರಥಗಳನ್ನು ಬೆಂಕಿಯಿಂದ ಸುಡುತ್ತಾರೆ. [QE]
10. [QS]“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; [QE][QS2]ಜನಾಂಗಗಳಲ್ಲಿ ಉನ್ನತನಾಗಿರುವೆನು; [QE][QS2]ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. [QE][PBR]
11. [QS]ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; [QE][QS2]ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
1 ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ. 2 ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ, 3 ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ, ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. 4 ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ. 5 ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು. 6 ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ. 7 ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ. 8 ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ. 9 ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ. 10 “ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. 11 ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
×

Alert

×

Kannada Letters Keypad References