ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಎಲ್ಲಾ ಜನರೇ, ಕೈ ತಟ್ಟಿರಿ; [QE][QS2]ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ. [QE][PBR]
2. [QS]ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ [QE][QS2]ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ. [QE]
3. [QS]ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. [QE][QS2]ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ. [QE]
4. [QS]ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ [QE][QS2]ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ. [QE][PBR]
5. [QS]ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. [QE][QS2]ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ. [QE]
6. [QS]ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; [QE][QS2]ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ. [QE]
7. [QS]ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. [QE][QS2]ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ. [QE][PBR]
8. [QS]ದೇವರು ಜನಾಂಗಗಳನ್ನು ಆಳುತ್ತಾರೆ. [QE][QS2]ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ. [QE]
9. [QS]ರಾಷ್ಟ್ರಗಳ ಅಧಿಪತಿಗಳು [QE][QS2]ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. [QE][QS]ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. [QE][QS2]ದೇವರು ಬಹಳವಾಗಿ ಘನ ಹೊಂದಿದ್ದಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 150
1 ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ. 2 ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ. 3 ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ. 4 ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ. 5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ. 6 ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ. 7 ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ. 8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ. 9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 150
×

Alert

×

Kannada Letters Keypad References