ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ [QE][QS2]ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ. [QE][PBR]
2. [QS]ಉತ್ತರ ದಿಕ್ಕಿನಲ್ಲಿರುವ [QE][QS2]ಮಹಾರಾಜರ ಪಟ್ಟಣವಾದ [QE][QS]ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ [QE][QS2]ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ. [QE]
3. [QS]ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. [QE][QS2]ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ. [QE][PBR]
4. [QS]ಏಕೆಂದರೆ, ಇಗೋ, ಅರಸರು ಕೂಡಿಬಂದರು. [QE][QS2]ಅವರು ಒಟ್ಟಾಗಿ ದಾಳಿಮಾಡಲು ಬಂದರು. [QE]
5. [QS]ಅವರು ಪಟ್ಟಣವನ್ನು ಕಂಡು, ಬೆರಗಾದರು. [QE][QS2]ಅವರು ಭಯಪಟ್ಟು ಓಡಿಹೋದರು. [QE]
6. [QS]ಅಲ್ಲಿ ನಡುಕವವೂ ಹೆರುವವಳ ಹಾಗೆ [QE][QS2]ನೋವೂ ಅವರನ್ನು ಹಿಡಿಯಿತು. [QE]
7. [QS]ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ [QE][QS2]ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ. [QE][PBR]
8. [QS]ನಾವು ಹೇಗೆ ಕೇಳಿದೆವೋ [QE][QS2]ಹಾಗೆಯೇ ಕಣ್ಣಾರೆ ಕಂಡೆವು, [QE][QS]ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, [QE][QS2]ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: [QE][QS]ದೇವರು ಪಟ್ಟಣವನ್ನು [QE][QS2]ಎಂದೆಂದಿಗೂ ಸ್ಥಿರಪಡಿಸುವರು. [QE][PBR]
9. [QS]ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು [QE][QS2]ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ. [QE]
10. [QS]ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ [QE][QS2]ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; [QE][QS2]ನಿಮ್ಮ ಬಲಗೈ ನೀತಿಯಿಂದ ತುಂಬಿದೆ. [QE]
11. [QS]ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ [QE][QS2]ಚೀಯೋನ್ ಪರ್ವತವು ಸಂತೋಷಪಡಲಿ; [QE][QS2]ಯೆಹೂದ ಪುತ್ರಿಯರು ಉಲ್ಲಾಸಪಡಲಿ. [QE][PBR]
12. [QS]ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ [QE][QS2]ಅದರ ಗೋಪುರಗಳನ್ನು ಎಣಿಸಿರಿ. [QE]
13. [QS]ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ [QE][QS2]ಅದರ ಗೋಪುರಗಳನ್ನು [QE][QS]ಕಣ್ಣಿಟ್ಟು ನೋಡಿರಿ, [QE][QS2]ಅದರ ಅರಮನೆಗಳನ್ನು ಲಕ್ಷಿಸಿರಿ. [QE][PBR]
14. [QS]ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; [QE][QS2]ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 48 / 150
1 ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ. 2 ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ. 3 ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ. 4 ಏಕೆಂದರೆ, ಇಗೋ, ಅರಸರು ಕೂಡಿಬಂದರು. ಅವರು ಒಟ್ಟಾಗಿ ದಾಳಿಮಾಡಲು ಬಂದರು. 5 ಅವರು ಪಟ್ಟಣವನ್ನು ಕಂಡು, ಬೆರಗಾದರು. ಅವರು ಭಯಪಟ್ಟು ಓಡಿಹೋದರು. 6 ಅಲ್ಲಿ ನಡುಕವವೂ ಹೆರುವವಳ ಹಾಗೆ ನೋವೂ ಅವರನ್ನು ಹಿಡಿಯಿತು. 7 ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ. 8 ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು. 9 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ. 10 ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ. 11 ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ. 12 ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ ಅದರ ಗೋಪುರಗಳನ್ನು ಎಣಿಸಿರಿ. 13 ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ. 14 ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 48 / 150
×

Alert

×

Kannada Letters Keypad References