ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? [QE][QS2]ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, [QE][QS2]ದೇವರ ಅನಂತ ಕೃಪೆಯು ಯಾವಾಗಲೂ ಇರುವದು. [QE]
2. [QS]ಮೋಸ ಮಾಡುವವನೇ, [QE][QS2]ಹದವಾದ ಕ್ಷೌರ ಕತ್ತಿಯ ಹಾಗೆ [QE][QS2]ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ. [QE]
3. [QS]ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. [QE][QS2]ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ. [QE]
4. [QS]ಮೋಸದ ನಾಲಿಗೆಯೇ, [QE][QS2]ನಿನಗೆ ಹಾನಿಕರವಾದ ಮಾತುಗಳೇ ಇಷ್ಟ. [QE][PBR]
5. [QS]ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. [QE][QS2]ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. [QE][QS2]ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು. [QE]
6. [QS]ನೀತಿವಂತರು ಇದನ್ನು ಕಂಡು ಭಯಪಡುವರು. [QE][QS2]ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು, [QE]
7. [QS]“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, [QE][QS2]ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು [QE][QS]ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ [QE][QS2]ಮನುಷ್ಯನು ಇವನೇ!” [QE][PBR]
8. [QS]ನಾನಾದರೋ ದೇವರ ಆಲಯದಲ್ಲಿರುವ [QE][QS2]ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು. [QE][QS]ದೇವರ ಒಡಂಬಡಿಕೆಯ ಪ್ರೀತಿಯಲ್ಲಿ [QE][QS2]ಯುಗಯುಗಾಂತರವೂ ಭರವಸವಿಟ್ಟಿರುವೆನು. [QE]
9. [QS]ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ [QE][QS2]ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. [QE][QS]ನಿಮ್ಮ ಹೆಸರು ಒಳ್ಳೆಯದು. [QE][QS2]ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
1 ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು. 2 ಮೋಸ ಮಾಡುವವನೇ, ಹದವಾದ ಕ್ಷೌರ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ. 3 ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ. 4 ಮೋಸದ ನಾಲಿಗೆಯೇ, ನಿನಗೆ ಹಾನಿಕರವಾದ ಮಾತುಗಳೇ ಇಷ್ಟ. 5 ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು. 6 ನೀತಿವಂತರು ಇದನ್ನು ಕಂಡು ಭಯಪಡುವರು. ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು, 7 “ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!” 8 ನಾನಾದರೋ ದೇವರ ಆಲಯದಲ್ಲಿರುವ ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು. ದೇವರ ಒಡಂಬಡಿಕೆಯ ಪ್ರೀತಿಯಲ್ಲಿ ಯುಗಯುಗಾಂತರವೂ ಭರವಸವಿಟ್ಟಿರುವೆನು. 9 ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. ನಿಮ್ಮ ಹೆಸರು ಒಳ್ಳೆಯದು. ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
×

Alert

×

Kannada Letters Keypad References