ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]“ದೇವರು ಇಲ್ಲಾ,” ಎಂದು [QE][QS2]ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. [QE][QS]ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. [QE][QS2]ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ. [QE][PBR]
2. [QS]ದೇವರನ್ನು ಹುಡುಕುವ [QE][QS2]ಜ್ಞಾನಿಗಳು ಇದ್ದಾರೋ [QE][QS]ಎಂದು ನೋಡುವುದಕ್ಕೆ [QE][QS2]ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು. [QE]
3. [QS]ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, [QE][QS2]ಒಬ್ಬರಾದರೂ ಇಲ್ಲ. [QE][QS2]ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು. [QE][PBR]
4. [QS]ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? [QE][PBR] [QS]ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? [QE][QS2]ಅವರು ದೇವರನ್ನು ಸ್ಮರಿಸುವುದೇ ಇಲ್ಲ. [QE]
5. [QS]ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; [QE][QS2]ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು [QE][QS]ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. [QE][QS2]ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ. [QE][PBR]
6. [QS]ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! [QE][QS2]ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ [QE][QS2]ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 53 / 150
1 “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ. 2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು. 3 ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು. 4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ. 5 ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ. 6 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 53 / 150
×

Alert

×

Kannada Letters Keypad References