ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. [QE][QS2]ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ [QE]
2. [QS]ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. [QE][QS2]ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ. [QE][PBR]
3. [QS]ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. [QE][QS2]ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. [QE][QS2]ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ. [QE]
4. [QS]ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. [QE][QS2]ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ. [QE]
5. [QS]ಸರ್ವಶಕ್ತರಾದ ಯೆಹೋವ ದೇವರೇ, [QE][QS2]ಇಸ್ರಾಯೇಲರ ದೇವರೇ, [QE][QS]ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. [QE][QS2]ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ. [QE][PBR]
6. [QS]ಅವರು ಸಂಜೆಗೆ ಹಿಂದಿರುಗುವರು. [QE][QS2]ನಾಯಿಯ ಹಾಗೆ ಬೊಗಳುವರು. [QE][QS2]ಪಟ್ಟಣವನ್ನು ಸುತ್ತುವರು. [QE]
7. [QS]ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. [QE][QS2]ಅವರ ತುಟಿಗಳಲ್ಲಿ ಖಡ್ಗಗಳು ಇವೆ. [QE][QS2]ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ. [QE]
8. [QS]ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. [QE][QS2]ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ. [QE][PBR]
9. [QS]ದೇವರೇ, ನನ್ನ ಬಲವೇ, ನಿಮಗಾಗಿ ಕಾದುಕೊಂಡಿರುವೆನು. [QE][QS2]ನನ್ನ ದೇವರೇ, ನೀವು ನನ್ನ ಕೋಟೆಯಾಗಿರುವಿರಿ. [QE]
2. [QS2]ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. [QE][PBR] [QS]ದೇವರು ನನ್ನ ನಿಂದಕರ [QE][QS2]ಮೇಲೆ ಜಯಿಸುವಂತೆ ಮಾಡುವರು. [QE]
11. [QS]ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, [QE][QS2]ನನ್ನ ಜನರು ಮರೆಯದ ಹಾಗೆ [QE][QS]ಅವರು ಉಳಿದಿರಲಿ. [QE][QS2]ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ. [QE]
12. [QS]ಅವರ ಬಾಯಿಯ ಪಾಪಕ್ಕೂ, [QE][QS2]ಅವರ ತುಟಿಗಳ ಮಾತಿಗೂ, [QE][QS2]ಅವರು ನುಡಿಯುವ ಶಾಪಕ್ಕೂ [QE][QS]ಅವರ ಗರ್ವವೇ ಅವರನ್ನು ಹಿಡಿಯಲಿ. [QE]
2. [QS2]ಅವರು ದಂಡನೆಗೆ ತುತ್ತಾಗಲಿ. [QE][QS2]ಅವರು ನಿರ್ನಾಮವಾಗಿಬಿಡಲಿ. [QE][QS]ಆಗ ಯಾಕೋಬರನ್ನು ಆಳುವವರು [QE][QS2]ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ. [QE][PBR]
14. [QS]ಅವರು ಸಂಜೆಗೆ ಹಿಂದಿರುಗುವರು. [QE][QS2]ನಾಯಿಯ ಹಾಗೆ ಬೊಗಳುವರು. [QE][QS2]ಪಟ್ಟಣವನ್ನು ಸುತ್ತುವರು. [QE]
15. [QS]ಅವರು ಆಹಾರಕ್ಕಾಗಿ ಅಲೆದಾಡುವರು. [QE][QS2]ತೃಪ್ತಿಯಾಗದಿದ್ದರೆ ಗೊಣಗುಟ್ಟುವರು. [QE]
16. [QS]ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. [QE][QS2]ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. [QE][QS]ಏಕೆಂದರೆ ನೀವು ನನಗೆ ಭದ್ರಕೋಟೆಯೂ, [QE][QS2]ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ. [QE][PBR]
17. [QS]ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. [QE][QS2]ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. [QE][QS2]ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 59 / 150
1 ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ 2 ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ. 3 ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ. 4 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ. 5 ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ. 6 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು. 7 ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ. 8 ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ. 9 ದೇವರೇ, ನನ್ನ ಬಲವೇ, ನಿಮಗಾಗಿ ಕಾದುಕೊಂಡಿರುವೆನು. ನನ್ನ ದೇವರೇ, ನೀವು ನನ್ನ ಕೋಟೆಯಾಗಿರುವಿರಿ. 2 ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. ದೇವರು ನನ್ನ ನಿಂದಕರ ಮೇಲೆ ಜಯಿಸುವಂತೆ ಮಾಡುವರು. 11 ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ. 12 ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ. 2 ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ. 14 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು. 15 ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು. 16 ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ. 17 ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 59 / 150
×

Alert

×

Kannada Letters Keypad References