ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, [QE][QS2]ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ. [QE]
2. [QS]ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; [QE][QS2]ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ. [QE]
3. [QS]ನನ್ನ ಪ್ರಾಣವು ಬಹು ಸಂಕಟದಲ್ಲಿದೆ. [QE][QS2]ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ? [QE][PBR]
4. [QS]ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; [QE][QS2]ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ. [QE]
5. [QS]ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. [QE][QS2]ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು? [QE][PBR]
6. [QS]ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. [QE][PBR] [QS]ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು [QE][QS2]ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, [QE][QS2]ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ. [QE]
7. [QS]ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, [QE][QS2]ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ. [QE][PBR]
8. [QS]ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, [QE][QS2]ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ. [QE]
9. [QS]ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; [QE][QS2]ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು. [QE]
10. [QS]ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; [QE][QS2]ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
1 ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ. 2 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ. 3 ನನ್ನ ಪ್ರಾಣವು ಬಹು ಸಂಕಟದಲ್ಲಿದೆ. ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ? 4 ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ. 5 ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು? 6 ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ. 7 ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ. 8 ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ. 9 ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು. 10 ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
×

Alert

×

Kannada Letters Keypad References