1. [QS]ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ. [QE][QS2]ನಿಮಗೆ ನಮ್ಮ ಹರಕೆಗಳನ್ನು ಪೂರೈಸುವೆವು. [QE]
2. [QS]ಪ್ರಾರ್ಥನೆಯನ್ನು ಕೇಳುವವರೇ, [QE][QS2]ಎಲ್ಲಾ ಜನರು ನಿಮ್ಮ ಬಳಿಗೆ ಬರುವರು. [QE]
3. [QS]ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ [QE][QS2]ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು. [QE]
4. [QS]ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. [QE][QS2]ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. [QE][QS]ನಿಮ್ಮ ಪರಿಶುದ್ಧ ಮಂದಿರವಾದ [QE][QS2]ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ. [QE][PBR]
5. [QS]ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, [QE][QS2]ನೀವು ನಮಗೆ ಉತ್ತರ ಕೊಡುವಿರಿ. [QE][QS]ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, [QE][QS2]ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ. [QE]
6. [QS]ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. [QE][QS2]ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ. [QE]
7. [QS]ಸಮುದ್ರಗಳ ಘೋಷವನ್ನೂ, [QE][QS2]ಅವುಗಳ ತೆರೆಗಳ ಘೋಷವನ್ನೂ, [QE][QS2]ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ. [QE]
8. [QS]ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. [QE][QS2]ಉದಯಾಸ್ತಮಾನಗಳಲ್ಲಿ ಇರುವವರನ್ನು [QE][QS2]ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ. [QE][PBR]
9. [QS]ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, [QE][QS2]ಅದನ್ನು ಫಲವತ್ತಾಗಿ ಮಾಡುತ್ತೀರಿ. [QE][QS]ದೇವರ ನದಿಯು ನೀರಿನಿಂದ ತುಂಬಿದೆ. [QE][QS2]ಹೀಗೆ ಭೂಮಿಯನ್ನು ಸಿದ್ಧಮಾಡಿ, [QE][QS2]ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ. [QE]
10. [QS]ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. [QE][QS2]ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ. [QE]
11. [QS]ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. [QE][QS2]ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ. [QE]
12. [QS]ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. [QE][QS2]ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ. [QE]
13. [QS]ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. [QE][QS2]ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. [QE][QS2]ಅವು ಉತ್ಸಾಹಗೊಂಡು ಹಾಡುತ್ತವೆ. [QE]