ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ. [QE][QS2]ದೇವರನ್ನು ವಿರೋಧಿಸುವವರು ಅವರ ಸಮ್ಮುಖದಿಂದ ಓಡಿಹೋಗಲಿ. [QE]
2. [QS]ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. [QE][QS2]ಮೇಣವು ಬೆಂಕಿಯ ಮುಂದೆ ಕರಗುವಂತೆ, [QE][QS2]ದುಷ್ಟರು ದೇವರ ಮುಂದೆ ನಾಶವಾಗಲಿ. [QE]
3. [QS]ಆದರೆ ನೀತಿವಂತರು ಸಂತೋಷಿಸಲಿ. [QE][QS2]ದೇವರ ಮುಂದೆ ಉಲ್ಲಾಸಪಡಲಿ. [QE][QS2]ಹೌದು, ಅವರು ಹರ್ಷಾನಂದರಾಗಲಿ. [QE][PBR]
4. [QS]ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. [QE][QS2]ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. [QE][QS2]ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ. [QE]
5. [QS]ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, [QE][QS2]ವಿಧವೆಯರಿಗೆ ರಕ್ಷಕರಾಗಿದ್ದಾರೆ. [QE]
6. [QS]ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ. [QE][QS2]ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ. [QE][QS2]ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ. [QE][PBR]
7. [QS]ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು [QE][QS2]ಕಾಡಿನಲ್ಲಿ ನಡೆದಾಗ, [QE]
8. [QS]ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು. [QE][QS2]ಇಸ್ರಾಯೇಲರ ದೇವರ ಮುಂದೆ, ಹೌದು, [QE][QS2]ದೇವರ ಮುಂದೆಯೇ ಸೀನಾಯಿ ಸಹ ಕದಲಿತು. [QE]
9. [QS]ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, [QE][QS2]ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ. [QE]
10. [QS]ನಿಮ್ಮ ಪ್ರಜೆಗಳು ಅದರಲ್ಲಿ ವಾಸಮಾಡಿದರು. [QE][QS2]ದೇವರೇ, ನಿಮ್ಮ ಒಳ್ಳೆಯತನದಿಂದ ಬಡವರಿಗೋಸ್ಕರ ಒದಗಿಸಿದ್ದೀರಿ. [QE][PBR]
11. [QS]ಯೆಹೋವ ದೇವರು ವಾಕ್ಯವನ್ನು ಕೊಟ್ಟರು. [QE][QS2]ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು: [QE]
12. [QS]“ಸೈನ್ಯದೊಡನೆ ಅರಸರು ಓಡಿಹೋದರು. [QE][QS2]ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು. [QE]
13. [QS]ನೀವು ಪಾಳೆಯದ ಬೆಂಕಿಯ[* ಪಾಳೆಯದ ಬೆಂಕಿಯ ಕೆಲವು ಪ್ರತಿಗಳಲ್ಲಿ ಕುರಿಹಟ್ಟಿ ] ಬಳಿ ಮಲಗಿದರೂ, [QE][QS2]ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, [QE][QS2]ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.” [QE]
14. [QS]ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ [QE][QS2]ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು. [QE][PBR]
15. [QS]ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; [QE][QS2]ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ. [QE]
16. [QS]ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? [QE][QS2]ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, [QE][QS2]ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು. [QE]
17. [QS]ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. [QE][QS2]ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ [QE][QS2]ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ. [QE]
18. [QS]ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, [QE][QS2]ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ [QE][QS2]ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ. [QE][PBR]
19. [QS]ಪ್ರತಿದಿನವೂ ನಮ್ಮ ಭಾರವನ್ನು ಹೊರುವ ಕರ್ತದೇವರಿಗೆ ಸ್ತೋತ್ರ. [QE][QS2]ನಮ್ಮನ್ನು ರಕ್ಷಿಸುವ ದೇವರು ಸ್ತುತಿಹೊಂದಲಿ. [QE]
20. [QS]ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ. [QE][QS2]ಸಾರ್ವಭೌಮ ಯೆಹೋವ ದೇವರು ಮರಣದಿಂದ ಬಿಡುಗಡೆ ಮಾಡುತ್ತಾರೆ. [QE]
21. [QS]ದೇವರು ತಮ್ಮ ಶತ್ರುಗಳ ತಲೆಯನ್ನೂ, [QE][QS2]ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು. [QE]
22. [QS]ಯೆಹೋವ ದೇವರು ಹೀಗೆ ಹೇಳುತ್ತಾರೆ, [QE][QS2]“ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; [QE][QS2]ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು. [QE]
23. [QS]ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ. [QE][QS2]ನಾಯಿಗಳು ಅದನ್ನು ನೆಕ್ಕಲಿ.” [QE][PBR]
24. [QS]ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. [QE][QS2]ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು. [QE]
25. [QS]ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, [QE][QS2]ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು. [QE]
26. [QS]ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ. [QE][QS2]ಇಸ್ರಾಯೇಲರ ಸಮೂಹದವರಲ್ಲಿ ಯೆಹೋವ ದೇವರನ್ನು ಸ್ತುತಿಸಿರಿ. [QE]
27. [QS]ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. [QE][QS2]ಯೆಹೂದದ ಪ್ರಧಾನರೂ, [QE][QS2]ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ. [QE][PBR]
28. [QS]ದೇವರೇ, ನಿಮ್ಮ ಶಕ್ತಿಯನ್ನು ಪ್ರಕಟಿಸಿರಿ, ಮೊದಲು ಮಾಡಿದಂತೆಯೇ [QE][QS2]ಈಗಲೂ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿರಿ. [QE]
29. [QS]ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ [QE][QS2]ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ. [QE]
30. [QS]ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ [QE][QS2]ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. [QE][QS]ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. [QE][QS2]ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ. [QE]
31. [QS]ಈಜಿಪ್ಟಿನಿಂದ ರಾಯಭಾರಿಗಳು ಬರುವರು. [QE][QS2]ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು. [QE][PBR]
32. [QS]ಭೂಮಿಯ ರಾಜ್ಯಗಳೇ, ದೇವರಿಗೆ ಹಾಡಿರಿ. [QE][QS2]ಯೆಹೋವ ದೇವರನ್ನು ಕೀರ್ತಿಸಿರಿ. [QE]
33. [QS]ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. [QE][QS2]ದೇವರ ಸ್ವರವು ಗುಡುಗಿನಂತೆ ಇರುವುದು. [QE]
34. [QS]ದೇವರ ಶಕ್ತಿಯನ್ನು ಘೋಷಿಸಿರಿ. [QE][QS2]ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. [QE][QS2]ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ. [QE]
35. [QS]ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. [QE][QS2]ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. [QE][PBR] [QS]ದೇವರಿಗೆ ಸ್ತುತಿಯಾಗಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 68 / 150
1 ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ. ದೇವರನ್ನು ವಿರೋಧಿಸುವವರು ಅವರ ಸಮ್ಮುಖದಿಂದ ಓಡಿಹೋಗಲಿ. 2 ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ. 3 ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ. 4 ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ. 5 ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ. 6 ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ. ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ. ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ. 7 ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, 8 ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು. ಇಸ್ರಾಯೇಲರ ದೇವರ ಮುಂದೆ, ಹೌದು, ದೇವರ ಮುಂದೆಯೇ ಸೀನಾಯಿ ಸಹ ಕದಲಿತು. 9 ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ. 10 ನಿಮ್ಮ ಪ್ರಜೆಗಳು ಅದರಲ್ಲಿ ವಾಸಮಾಡಿದರು. ದೇವರೇ, ನಿಮ್ಮ ಒಳ್ಳೆಯತನದಿಂದ ಬಡವರಿಗೋಸ್ಕರ ಒದಗಿಸಿದ್ದೀರಿ. 11 ಯೆಹೋವ ದೇವರು ವಾಕ್ಯವನ್ನು ಕೊಟ್ಟರು. ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು: 12 “ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು. 13 ನೀವು ಪಾಳೆಯದ ಬೆಂಕಿಯ* ಪಾಳೆಯದ ಬೆಂಕಿಯ ಕೆಲವು ಪ್ರತಿಗಳಲ್ಲಿ ಕುರಿಹಟ್ಟಿ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.” 14 ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು. 15 ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ. 16 ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು. 17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ. 18 ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ. 19 ಪ್ರತಿದಿನವೂ ನಮ್ಮ ಭಾರವನ್ನು ಹೊರುವ ಕರ್ತದೇವರಿಗೆ ಸ್ತೋತ್ರ. ನಮ್ಮನ್ನು ರಕ್ಷಿಸುವ ದೇವರು ಸ್ತುತಿಹೊಂದಲಿ. 20 ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ. ಸಾರ್ವಭೌಮ ಯೆಹೋವ ದೇವರು ಮರಣದಿಂದ ಬಿಡುಗಡೆ ಮಾಡುತ್ತಾರೆ. 21 ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು. 22 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು. 23 ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ. ನಾಯಿಗಳು ಅದನ್ನು ನೆಕ್ಕಲಿ.” 24 ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು. 25 ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು. 26 ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ. ಇಸ್ರಾಯೇಲರ ಸಮೂಹದವರಲ್ಲಿ ಯೆಹೋವ ದೇವರನ್ನು ಸ್ತುತಿಸಿರಿ. 27 ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ. 28 ದೇವರೇ, ನಿಮ್ಮ ಶಕ್ತಿಯನ್ನು ಪ್ರಕಟಿಸಿರಿ, ಮೊದಲು ಮಾಡಿದಂತೆಯೇ ಈಗಲೂ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿರಿ. 29 ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ. 30 ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ. 31 ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು. 32 ಭೂಮಿಯ ರಾಜ್ಯಗಳೇ, ದೇವರಿಗೆ ಹಾಡಿರಿ. ಯೆಹೋವ ದೇವರನ್ನು ಕೀರ್ತಿಸಿರಿ. 33 ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು. 34 ದೇವರ ಶಕ್ತಿಯನ್ನು ಘೋಷಿಸಿರಿ. ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ. 35 ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 68 / 150
×

Alert

×

Kannada Letters Keypad References