ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನನ್ನ ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿದ್ದೇನೆ; [QE][QS2]ನನ್ನನ್ನು ಬೆನ್ನಟ್ಟಿದ ಎಲ್ಲರಿಂದಲೂ ನನ್ನನ್ನು ರಕ್ಷಿಸಿ ಕಾಪಾಡಿರಿ, [QE]
2. [QS]ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು [QE][QS2]ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು. [QE][PBR]
3. [QS]ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ, [QE][QS2]ನನ್ನ ಕೈಗಳಲ್ಲಿ ಅಪರಾಧವಿದ್ದರೆ, [QE]
4. [QS]ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, [QE][QS2]ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ, [QE]
5. [QS]ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. [QE][QS2]ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ [QE][QS2]ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ. [QE][PBR]
6. [QS]ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; [QE][QS2]ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. [QE][QS2]ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ. [QE]
7. [QS]ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ, [QE][QS2]ಉನ್ನತದಿಂದ ನೀವು ಅವರ ಮೇಲೆ ಸಿಂಹಾಸನದಲ್ಲಿದ್ದು ಆಳಿರಿ. [QE]
2. [QS2]ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. [QE][QS]ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, [QE][QS2]ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ. [QE]
9. [QS]ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ [QE][QS2]ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. [QE][QS]ನೀತಿಯುಳ್ಳ ದೇವರೇ, [QE][QS2]ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ. [QE][PBR]
10. [QS]ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ,[* ಗುರಾಣಿಯಾಗಿದ್ದಾರೆ ಅಥವಾ ಪ್ರಭುವಾಗಿದ್ದಾರೆ ] [QE][QS2]ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ. [QE]
11. [QS]ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ. [QE][QS2]ದೇವರು ದುಷ್ಟನ ಮೇಲೆ ಸದಾ ರೋಷವುಳ್ಳವರಾಗಿದ್ದಾರೆ. [QE]
12. [QS]ಅಂಥವರು ತಿರುಗಿಕೊಳ್ಳದಿದ್ದರೆ [QE][QS2]ದೇವರು ತಮ್ಮ ಖಡ್ಗ ಮಸೆಯುವರು; [QE][QS2]ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು. [QE]
13. [QS]ಅಂಥವರಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿದ್ದಾರೆ; [QE][QS2]ತಮ್ಮ ಅಗ್ನಿಬಾಣಗಳನ್ನು ಸಿದ್ಧಮಾಡುತ್ತಾರೆ. [QE][PBR]
14. [QS]ಅಂಥವರು ದುಷ್ಟತನವನ್ನು ಗರ್ಭಧರಿಸಿ, [QE][QS2]ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು. [QE]
15. [QS]ಅಂಥವರು ಕುಣಿಯನ್ನು ಅಗೆದಿದ್ದಾರೆ. [QE][QS2]ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು. [QE]
16. [QS]ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; [QE][QS2]ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು. [QE][PBR]
17. [QS]ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. [QE][QS2]ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 150
1 ನನ್ನ ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿದ್ದೇನೆ; ನನ್ನನ್ನು ಬೆನ್ನಟ್ಟಿದ ಎಲ್ಲರಿಂದಲೂ ನನ್ನನ್ನು ರಕ್ಷಿಸಿ ಕಾಪಾಡಿರಿ, 2 ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು. 3 ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ, ನನ್ನ ಕೈಗಳಲ್ಲಿ ಅಪರಾಧವಿದ್ದರೆ, 4 ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ, 5 ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ. 6 ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ. 7 ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ, ಉನ್ನತದಿಂದ ನೀವು ಅವರ ಮೇಲೆ ಸಿಂಹಾಸನದಲ್ಲಿದ್ದು ಆಳಿರಿ. 2 ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ. 9 ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ. 10 ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ,* ಗುರಾಣಿಯಾಗಿದ್ದಾರೆ ಅಥವಾ ಪ್ರಭುವಾಗಿದ್ದಾರೆ ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ. 11 ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ. ದೇವರು ದುಷ್ಟನ ಮೇಲೆ ಸದಾ ರೋಷವುಳ್ಳವರಾಗಿದ್ದಾರೆ. 12 ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು. 13 ಅಂಥವರಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿದ್ದಾರೆ; ತಮ್ಮ ಅಗ್ನಿಬಾಣಗಳನ್ನು ಸಿದ್ಧಮಾಡುತ್ತಾರೆ. 14 ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು. 15 ಅಂಥವರು ಕುಣಿಯನ್ನು ಅಗೆದಿದ್ದಾರೆ. ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು. 16 ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು. 17 ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 150
×

Alert

×

Kannada Letters Keypad References