ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ; [QE][QS2]ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ. [QE][PBR]
2. [QS]ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು [QE][QS2]ನಾಚಿಕೆಪಟ್ಟು ಗಲಿಬಿಲಿಯಾಗಲಿ. [QE][QS]ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ [QE][QS2]ಹಿಂಜರಿದು ಅವಮಾನ ಹೊಂದಲಿ. [QE]
3. [QS]“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು [QE][QS2]ತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ. [QE]
4. [QS]ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ [QE][QS2]ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. [QE][QS]ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, [QE][QS2]“ದೇವರು ಮಹೋನ್ನತರು,” [QE][QS2]ಎಂದು ಯಾವಾಗಲೂ ಹೇಳಲಿ. [QE][PBR]
5. [QS]ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. [QE][QS2]ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. [QE][QS]ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, [QE][QS2]ಯೆಹೋವ ದೇವರೇ, ತಡಮಾಡದೆ ಬನ್ನಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
1 ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ; ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ. 2 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ. 3 “ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ. 4 ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ. 5 ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, ಯೆಹೋವ ದೇವರೇ, ತಡಮಾಡದೆ ಬನ್ನಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
×

Alert

×

Kannada Letters Keypad References