1. [QS]ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ; [QE][QS2]ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ. [QE]
2. [QS]ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. [QE][QS2]ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು. [QE]
3. [QS]ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. [QE][QS2]ನಮ್ಮ ಪಿತೃಗಳು ನಮಗೆ ವಿವರಿಸಿದರು. [QE]
4. [QS]ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ [QE][QS2]ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. [QE][QS2]ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು. [QE]
5. [QS]ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, [QE][QS2]ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, [QE][QS]ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, [QE][QS2]ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ, [QE]
6. [QS]ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ, [QE][QS2]ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು [QE][QS2]ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು. [QE]
7. [QS]ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. [QE][QS2]ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ [QE][QS2]ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು. [QE]
8. [QS]ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, [QE][QS2]ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, [QE][QS]ಅವರ ಆತ್ಮವು ದೇವರಲ್ಲಿ [QE][QS2]ನಂಬಿಗಸ್ತಿಕೆಯಿಂದಲೂ ಇರಲಿಲ್ಲ. [QE][PBR]
9. [QS]ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ [QE][QS2]ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು. [QE]
10. [QS]ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. [QE][QS2]ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು. [QE]
11. [QS]ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ [QE][QS2]ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು. [QE]
12. [QS]ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, [QE][QS2]ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು. [QE]
13. [QS]ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. [QE][QS2]ನೀರನ್ನು ಗೋಡೆಯಾಗಿ ನಿಲ್ಲಿಸಿದರು. [QE]
14. [QS]ದೇವರು ಹಗಲಿನಲ್ಲಿ ಮೇಘದಿಂದಲೂ [QE][QS2]ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು. [QE]
15. [QS]ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, [QE][QS2]ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು. [QE]
16. [QS]ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, [QE][QS2]ನದಿಗಳನ್ನು ನೀರನ್ನು ಹರಿಯಮಾಡಿದರು. [QE][PBR]
17. [QS]ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, [QE][QS2]ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು. [QE]
18. [QS]ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, [QE][QS2]ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು. [QE]
19. [QS]ಹೌದು, ಅವರು ದೇವರಿಗೆ [QE][QS2]ವಿರೋಧವಾಗಿ ಮಾತನಾಡಿ, [QE][QS2]“ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ? [QE]
20. [QS]ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, [QE][QS2]ನೀರು ಚಿಮ್ಮಿ ಹೊರಟಿತು. [QE][QS2]ಹಳ್ಳಗಳು ದಡಮೀರಿ ಹರಿದವು. [QE][QS]ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? [QE][QS2]ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು. [QE]
21. [QS]ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. [QE][QS2]ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. [QE][QS2]ಇಸ್ರಾಯೇಲರು ದಂಡನೆಗೆ ಒಳಗಾದರು. [QE]
22. [QS]ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. [QE][QS2]ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ. [QE]
23. [QS]ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, [QE][QS2]ಆಕಾಶದ ಕದಗಳನ್ನು ತೆರೆದರು. [QE]
24. [QS]ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, [QE][QS2]ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು. [QE]
25. [QS]ದೇವದೂತರ ಆಹಾರವನ್ನು ಮಾನವರು ತಿಂದರು. [QE][QS2]ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು. [QE]
26. [QS]ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, [QE][QS2]ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು. [QE]
27. [QS]ಧೂಳಿನಂತೆ ಮಾಂಸವನ್ನು ಸುರಿಸಿದರು. [QE][QS2]ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು. [QE]
28. [QS]ಅವರ ಮಧ್ಯದಲ್ಲಿಯೂ [QE][QS2]ಅವರ ಗುಡಾರಗಳ ಸುತ್ತಲೂ ಸುರಿಸಿದರು. [QE]
29. [QS]ಆಗ ಅವರು ತಿಂದು ಬಹಳ ತೃಪ್ತಿಗೊಂಡರು. [QE][QS2]ಅವರು ಆಶಿಸಿದ್ದನ್ನು ದೇವರು ಕೊಟ್ಟರು. [QE]
30. [QS]ಅವರು ತಮ್ಮ ಆಶೆಯನ್ನು ಬಿಡದೆ, [QE][QS2]ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ, [QE]
31. [QS]ದೇವರ ಶಿಕ್ಷೆ ಅವರ ಮೇಲೆ ಬಿತ್ತು. [QE][QS2]ಅವರಲ್ಲಿ ಕೊಬ್ಬಿದವರು ಸತ್ತರು. [QE][QS2]ಇಸ್ರಾಯೇಲರ ಪ್ರಾಯಸ್ಥರು ಸಹ ಸತ್ತುಹೋದರು. [QE][PBR]
32. [QS]ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. [QE][QS2]ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ. [QE]
33. [QS]ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ [QE][QS2]ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು. [QE]
34. [QS]ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. [QE][QS2]ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. [QE]
35. [QS]ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು [QE][QS2]ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು. [QE]
36. [QS]ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, [QE][QS2]ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು. [QE]
37. [QS]ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. [QE][QS2]ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ. [QE]
38. [QS]ಆದಾಗ್ಯೂ ದೇವರು ಅವರನ್ನು ಕರುಣಿಸಿ, [QE][QS2]ಅವರ ಅಕ್ರಮವನ್ನು ಕ್ಷಮಿಸಿ, [QE][QS2]ನಾಶಮಾಡದೆ ಬಿಟ್ಟುಬಿಟ್ಟರು. [QE][QS]ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, [QE][QS2]ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ. [QE]
39. [QS]ಜನರು ಬರೀ ಮಾಂಸ ಮಾತ್ರದವರೂ [QE][QS2]ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು. [QE][PBR]
40. [QS]ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. [QE][QS2]ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು. [QE]
41. [QS]ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. [QE][QS2]ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು. [QE]
42. [QS]ದೇವರು ಅವರನ್ನು [QE][QS2]ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ. [QE]
43. [QS]ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, [QE][QS2]ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು [QE][QS2]ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ. [QE]
44. [QS]ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. [QE][QS2]ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು. [QE]
45. [QS]ಅವರಲ್ಲಿ ವಿವಿಧ ಹುಳುಗಳು ಬಂದವು. [QE][QS2]ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. [QE][QS2]ಅವು ಸಹ ಅವರನ್ನು ಹಾನಿಮಾಡಿದವು. [QE]
46. [QS]ಅವರ ಬೆಳೆಗಳು ಕಂಬಳಿ ಹುಳುಗಳಿಗೂ [QE][QS2]ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು. [QE]
47. [QS]ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ [QE][QS2]ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು. [QE]
48. [QS]ಅವರ ದನಗಳು ಕಲ್ಮಳೆಗೂ [QE][QS2]ಅವರ ಪಶುಗಳು ಸಿಡಿಲಿಗೂ ಒಳಪಟ್ಟವು. [QE]
49. [QS]ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ [QE][QS2]ತಮ್ಮ ಬೇಸರದಿಂದಲೂ ದುಃಖದಿಂದಲೂ [QE][QS2]ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು. [QE]
50. [QS]ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, [QE][QS2]ಅವರನ್ನು ಪೂರ್ಣವಾಗಿ ದಂಡಿಸಿದರು. [QE][QS2]ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು, [QE]
51. [QS]ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, [QE][QS2]ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು. [QE]
52. [QS]ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, [QE][QS2]ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು. [QE]
53. [QS]ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. [QE][QS2]ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. [QE]
54. [QS]ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ, [QE][QS2]ಈ ಪರ್ವತ ನಾಡಿಗೂ ಅವರನ್ನು ಬರಮಾಡಿದರು. [QE]
55. [QS]ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, [QE][QS2]ಅವರ ಬಾಧ್ಯತೆಯನ್ನು ಹಂಚಿ, [QE][QS2]ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು. [QE][PBR]
56. [QS]ಆದರೆ ಜನರು ಮಹೋನ್ನತರಾದ ದೇವರನ್ನು [QE][QS2]ಪರೀಕ್ಷಿಸಿ ವಿರೋಧಿಸಿದರು; [QE][QS2]ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ. [QE]
57. [QS]ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ, [QE][QS2]ಅಪನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ಓರೆಯಾದರು. [QE]
58. [QS]ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. [QE][QS2]ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು. [QE]
59. [QS]ದೇವರು ಇದನ್ನು ಕಂಡಾಗ, ಬೇಸರಗೊಂಡು [QE][QS2]ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು. [QE]
60. [QS]ದೇವರು ಸಿಲೋವಿನ ಗುಡಾರನ್ನೂ [QE][QS2]ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು. [QE]
61. [QS]ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. [QE][QS2]ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು. [QE]
62. [QS]ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು. [QE][QS2]ತಮ್ಮ ಸ್ವಾಸ್ಥತೆಗೆ ವಿರೋಧವಾಗಿದ್ದರು. [QE]
63. [QS]ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. [QE][QS2]ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ. [QE]
64. [QS]ಅವರ ಯಾಜಕರು ಖಡ್ಗದಿಂದ ಸಂಹಾರವಾದರು. [QE][QS2]ಅವರ ವಿಧವೆಯರು ಗೋಳಾಡಲಿಲ್ಲ. [QE][PBR]
65. [QS]ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. [QE][QS2]ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು. [QE]
66. [QS]ತಮ್ಮ ವೈರಿಗಳನ್ನು ದಂಡಿಸಿದರು. [QE][QS2]ನಿತ್ಯನಿಂದೆಯೇ ಅವರ ಪಾಲಾಯಿತು. [QE]
67. [QS]ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, [QE][QS2]ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ, [QE]
68. [QS]ಯೆಹೂದನ ಕುಲವನ್ನೂ, [QE][QS2]ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು. [QE]
69. [QS]ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ [QE][QS2]ಭೂಮಿಯಂತೆಯೂ ತಮ್ಮ ಪರಿಶುದ್ಧ ಸ್ಥಳವನ್ನು ಕಟ್ಟಿದರು. [QE]
70. [QS]ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, [QE][QS2]ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು. [QE]
71. [QS]ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ [QE][QS2]ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ [QE][QS2]ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು. [QE]
72. [QS]ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ [QE][QS2]ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು. [QE]