ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನಮ್ಮ ಕರ್ತ ಆಗಿರುವ ಯೆಹೋವ ದೇವರೇ, [QE][QS2]ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! [QE][PBR] [QS]ನೀವು ನಿಮ್ಮ ಮಹಿಮೆಯನ್ನು [QE][QS2]ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ. [QE]
2. [QS]ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ [QE][QS2]ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, [QE][QS2]ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ. [QE]
3. [QS]ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ [QE][QS2]ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ [QE][QS2]ನಾನು ನೋಡಿದಾಗ, [QE]
4. [QS]ನೀವು ಮಾನವರನ್ನು ನೆನಸಲು ಅವರು ಎಷ್ಟರವರು? [QE][QS2]ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು? [QE][PBR]
5. [QS]ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ[* ದೇವರಿಗಿಂತಲೂ ಅಥವಾ ದೇವದೂತರಿಗಿಂತಲೂ ] ಸ್ವಲ್ಪ ಕಡಿಮೆ ಮಾಡಿ, [QE][QS2]ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ. [QE]
6. [QS]ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, [QE][QS2]ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ: [QE]
7. [QS]ಎಲ್ಲಾ ಕುರಿದನಗಳನ್ನೂ [QE][QS2]ಅಡವಿಯ ಮೃಗಗಳನ್ನೂ [QE]
8. [QS]ಆಕಾಶದ ಪಕ್ಷಿಗಳನ್ನೂ [QE][QS2]ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ [QE][QS2]ಅವನ ಪಾದಗಳ ಕೆಳಗೆ ಹಾಕಿದ್ದೀರಿ. [QE][PBR]
9. [QS]ನಮ್ಮ ಕರ್ತ ಆಗಿರುವ ಯೆಹೋವ ದೇವರೇ, [QE][QS2]ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
1 ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ. 2 ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ. 3 ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ, 4 ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು? 5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ* ದೇವರಿಗಿಂತಲೂ ಅಥವಾ ದೇವದೂತರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ. 6 ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ: 7 ಎಲ್ಲಾ ಕುರಿದನಗಳನ್ನೂ ಅಡವಿಯ ಮೃಗಗಳನ್ನೂ 8 ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ. 9 ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
×

Alert

×

Kannada Letters Keypad References