1. [QS]ಮಂದೆಯಂತೆ ಯೋಸೇಫ್ಯರನ್ನು ನಡೆಸುವ [QE][QS2]ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. [QE][QS]ಕೆರೂಬಿಗಳ ಮಧ್ಯದಲ್ಲಿ [QE][QS2]ಆಸೀನವಾಗಿರುವ ದೇವರೇ ಪ್ರಕಾಶಿಸಿರಿ. [QE]
2. [QS2]ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ [QE][QS]ನಿಮ್ಮ ಪರಾಕ್ರಮವನ್ನು ತೋರಿಸಲು [QE][QS2]ಬಂದು ನಮ್ಮನ್ನು ರಕ್ಷಿಸಿರಿ. [QE][PBR]
3. [QS]ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. [QE][QS2]ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. [QE][QS2]ಆಗ ನಾವು ರಕ್ಷಣೆ ಹೊಂದುವೆವು. [QE][PBR]
4. [QS]ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, [QE][QS2]ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ [QE][QS2]ವಿರೋಧವಾಗಿ ಬೇಸರಗೊಳ್ಳುವಿರಿ? [QE]
5. [QS]ರೋದನವೇ ನಮ್ಮ ಅನ್ನವಾಗುವಂತೆಯೂ [QE][QS2]ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ. [QE]
6. [QS]ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. [QE][QS2]ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ. [QE][PBR]
7. [QS]ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. [QE][QS2]ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. [QE][QS2]ಆಗ ನಾವು ರಕ್ಷಣೆ ಹೊಂದುವೆವು. [QE][PBR]
8. [QS]ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, [QE][QS2]ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ. [QE]
9. [QS]ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. [QE][QS2]ಆಗ ಅದು ಬೇರೂರಿ ದೇಶವನ್ನು ತುಂಬಿತು. [QE]
10. [QS]ಅದರ ನೆರಳಿನಿಂದ ಬೆಟ್ಟಗಳೂ [QE][QS2]ಅದರ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲಾದವು. [QE]
11. [QS]ಅದು ತನ್ನ ರೆಂಬೆಗಳನ್ನು ಸಮುದ್ರದವರೆಗೂ, [QE][QS2]ತನ್ನ ಬಳ್ಳಿಗಳನ್ನು ನದಿಯವರೆಗೂ ಹರಡಿಸಿತು. [QE][PBR]
12. [QS]ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ [QE][QS2]ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ? [QE]
13. [QS]ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; [QE][QS2]ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ. [QE]
14. [QS]ಸೇನಾಧೀಶ್ವರ ದೇವರೇ, ನಿಮ್ಮ ದರ್ಶನವಾಗಲಿ. [QE][QS2]ನೀವು ಪರಲೋಕದಿಂದ ಕಟಾಕ್ಷಿಸಿರಿ. [QE][QS]ಈ ದ್ರಾಕ್ಷಾಲತೆಯನ್ನು ಪರಾಮರಿಸಿರಿ. [QE]
2. [QS2]ನಿಮ್ಮ ಬಲಗೈ ನೆಟ್ಟ ಸಸಿಯನ್ನೂ [QE][QS2]ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ[* ಬಳ್ಳಿಯನ್ನೂ ಇನ್ನೊಂದು ಅರ್ಥದಲ್ಲಿ ಮಗನು ] ಪರಾಮರಿಸಿರಿ. [QE][PBR]
16. [QS]ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. [QE][QS2]ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು. [QE]
17. [QS]ನಿಮ್ಮ ಬಲಗಡೆಯಲ್ಲಿರುವಾತನ ಮೇಲೆ ನಿಮ್ಮ ಹಸ್ತವಿರಲಿ. [QE][QS2]ನಿಮಗಾಗಿ ಆ ನರಪುತ್ರನನ್ನು ಎಬ್ಬಿಸಿದ್ದೀರಿ. [QE]
18. [QS]ಆಗ ನಾವು ನಿಮ್ಮಿಂದ ತೊಲಗುವುದಿಲ್ಲ. [QE][QS2]ನಮ್ಮನ್ನು ಉಜ್ಜೀವಿಸಿರಿ, ಆಗ ನಿಮ್ಮ ಹೆಸರನ್ನು ಕರೆಯುವೆವು. [QE][PBR]
19. [QS]ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. [QE][QS2]ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. [QE][QS2]ಆಗ ನಾವು ರಕ್ಷಣೆ ಹೊಂದುವೆವು. [QE]