1. [QS]ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. [QE][QS2]ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು [QE][QS2]ನನ್ನ ಬಾಯಿ ತಿಳಿಯಪಡಿಸುವುದು. [QE]
2. [QS]ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. [QE][QS2]ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು. [QE]
3. [QS]ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. [QE][QS2]ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ. [QE]
4. [QS]‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು [QE][QS2]ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’ ” [QE][PBR]
5. [QS]ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ [QE][QS2]ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು. [QE]
6. [QS]ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? [QE][QS2]ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? [QE]
7. [QS]ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. [QE][QS2]ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು. [QE]
8. [QS]ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ಹಾಗೆ ಶಕ್ತರು ಯಾರು ಇದ್ದಾರೆ? [QE][QS2]ಯೆಹೋವ ದೇವರೇ, ನೀವು ಶಕ್ತರು, ನಿಮ್ಮ ನಂಬಿಗಸ್ತಿಕೆಯು ನಿಮ್ಮನ್ನು ಸುತ್ತುವರಿದಿದೆ. [QE][PBR]
9. [QS]ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. [QE][QS2]ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ. [QE]
10. [QS]ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. [QE][QS2]ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ. [QE]
11. [QS]ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. [QE][QS2]ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ. [QE]
12. [QS]ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. [QE][QS2]ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ. [QE]
13. [QS]ನಿಮ್ಮ ಭುಜವು ಶಕ್ತಿಯುತವಾದದ್ದು. [QE][QS2]ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು. [QE][PBR]
14. [QS]ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. [QE][QS2]ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ. [QE]
15. [QS]ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. [QE][QS2]ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು. [QE]
16. [QS]ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, [QE][QS2]ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು. [QE]
17. [QS]ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. [QE][QS2]ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು. [QE]
18. [QS]ನಮ್ಮ ಗುರಾಣಿಯು ಯೆಹೋವ ದೇವರದೇ. [QE][QS2]ನಮ್ಮ ಅರಸರು ಇಸ್ರಾಯೇಲರ ಪರಿಶುದ್ಧರಾಗಿರುವರು. [QE][PBR]
19. [QS]ಆ ಕಾಲದಲ್ಲಿ ನೀವು ದರ್ಶನದಲ್ಲಿ [QE][QS2]ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: [QE][QS]“ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. [QE][QS2]ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ. [QE]
20. [QS]ನನ್ನ ಸೇವಕನಾದ ದಾವೀದನನ್ನು ಕಂಡು, [QE][QS2]ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ. [QE]
21. [QS]ನನ್ನ ಕೈ ಅವನನ್ನು ಪರಿಪಾಲಿಸುವುದು; [QE][QS2]ನನ್ನ ಭುಜವು ಅವನನ್ನು ಬಲಪಡಿಸುವುದು. [QE]
22. [QS]ಶತ್ರುವು ಅವನನ್ನು ಜಯಿಸಲಾರನು. [QE][QS2]ಯಾವ ದುಷ್ಟನೂ ಅವನನ್ನು ಹಿಂಸೆಪಡಿಸನು. [QE]
23. [QS]ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; [QE][QS2]ಅವನ ವಿರೋಧಿಗಳನ್ನು ದಂಡಿಸುವೆನು. [QE]
24. [QS]ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. [QE][QS2]ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು. [QE]
25. [QS]ಸಮುದ್ರ ಹಾಗು ನದಿಗಳ ಮೇಲೆ [QE][QS2]ಅವನ ಬಲಗೈಯನ್ನೂ ಇರಿಸುವೆನು. [QE]
26. [QS]ಅವನು, ‘ನೀವು ನನ್ನ ತಂದೆಯೂ [QE][QS2]ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು. [QE]
27. [QS]ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ [QE][QS2]ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು. [QE]
28. [QS]ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. [QE][QS2]ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು. [QE]
29. [QS]ಆತನ ಸಂತತಿಯನ್ನು ಸಹ ಎಂದೆಂದಿಗೂ [QE][QS2]ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು. [QE][PBR]
30. [QS]“ಆತನ ಸಂತತಿಯು ನನ್ನ ನಿಯಮವನ್ನು ಬಿಟ್ಟು, [QE][QS2]ನನ್ನ ಶಾಸನಗಳನ್ನು ಅನುಸರಿಸಿ ನಡೆಯದೆ, [QE]
31. [QS]ಅವರು ನನ್ನ ತೀರ್ಪುಗಳನ್ನು ಮುರಿದು, [QE][QS2]ನನ್ನ ಆಜ್ಞೆಗಳನ್ನು ಕೈಗೊಳ್ಳದೆ ಹೋದರೆ, [QE]
32. [QS]ಕೋಲಿನಿಂದ ಅವರ ದ್ರೋಹವನ್ನೂ [QE][QS2]ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. [QE]
33. [QS]ಆದರೂ ನನ್ನ ಪ್ರೀತಿ, ಕರುಣೆಯನ್ನು ಆತನಿಂದ ಸಂಪೂರ್ಣವಾಗಿ ತೊಲಗಿಸೆನು. [QE][QS2]ಇಲ್ಲವೆ ನನ್ನ ನಂಬಿಗಸ್ತಿಕೆಯಿಂದ ನಾನು ಜಾರಿಹೋಗೆನು. [QE]
34. [QS]ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. [QE][QS2]ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. [QE]
35. [QS]ಒಂದೇ ಸಾರಿ ನನ್ನ ಪರಿಶುದ್ಧತ್ವದಿಂದ ಆಣೆಯಿಟ್ಟು ಹೇಳಿದ್ದೇನೆ. [QE][QS2]ದಾವೀದನಿಗೆ ಸುಳ್ಳಾಡೆನು. [QE]
36. [QS]ಆತನ ಸಂತತಿಯು ಯುಗಯುಗಕ್ಕೂ ಇರುವುದು. [QE][QS2]ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು. [QE]
37. [QS]ಚಂದ್ರನ ಹಾಗೆ ಅದು ಯುಗಯುಗಕ್ಕೂ ಸ್ಥಿರವಾಗಿರುವುದು; [QE][QS2]ಆಕಾಶದಲ್ಲಿರುವ ಸಾಕ್ಷಿಯ ಹಾಗೆ ನಂಬಿಗಸ್ತಿಕೆಯುಳ್ಳದ್ದಾಗಿರುವುದು.” [QE][PBR]
38. [QS]ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, [QE][QS2]ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ. [QE]
39. [QS]ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, [QE][QS2]ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ. [QE]
40. [QS]ಅವನ ಗೋಡೆಗಳನ್ನೆಲ್ಲಾ ಮುರಿದು, [QE][QS2]ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ. [QE]
41. [QS]ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. [QE][QS2]ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ. [QE]
42. [QS]ಅವನ ವೈರಿಗಳ ಬಲಗೈ ಉನ್ನತವಾಗಿದೆ. [QE][QS2]ಅವನ ವೈರಿಗಳೆಲ್ಲಾ ಆನಂದಿಸುತ್ತಿದ್ದಾರೆ. [QE]
43. [QS]ಅವನ ಖಡ್ಗದ ಮೊನೆ ಮೊಂಡಾಗಿದೆ. [QE][QS2]ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ. [QE]
44. [QS]ಅವನ ಪ್ರಭೆ ಮುಗಿದು ಹೋಗಿದೆ. [QE][QS2]ಅವನ ಸಿಂಹಾಸನ ಉರುಳಿಬಿಟ್ಟಿದೆ. [QE]
45. [QS]ಅವನ ಯೌವನದ ದಿವಸಗಳು ಕಡಿಮೆಯಾಗಿದೆ. [QE][QS2]ನಾಚಿಕೆ ಎಂಬ ವಸ್ತ್ರ ಅವನನ್ನು ಮುಚ್ಚಲು ನೀವು ಅನುಮತಿಸಿದ್ದೀರಿ. [QE][PBR]
46. [QS]ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? [QE][QS2]ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ? [QE]
47. [QS]ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. [QE][QS2]ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ. [QE]
48. [QS]ಮರಣವನ್ನು ಕಾಣದೆ ಬದುಕುವಂಥವರು ಯಾರು? [QE][QS2]ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು? [QE]
49. [QS]ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. [QE][QS2]ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ? [QE]
50. [QS]ಯೆಹೋವ ದೇವರೇ, ನಿಮ್ಮ ಸೇವಕನು ನಿಂದೆ ಹೊಂದಿರುವದನ್ನು ನೆನಸಿಕೊಳ್ಳಿರಿ. [QE][QS2]ಎಲ್ಲಾ ರಾಷ್ಟ್ರಗಳ ಅಪಹಾಸ್ಯವನ್ನು ನಾನು ಹೇಗೆ [QE][QS2]ಸಹಿಸಿದೆನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. [QE]
51. [QS]ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. [QE][QS2]ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ? [QE][PBR] [PBR]
52. [QS]ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ. [QE][QCS]ಆಮೆನ್, ಆಮೆನ್. [QCE]