1. [QS]ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು; [QE][QS2]ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು. [QE]
2. [QS]ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು; [QE][QS2]ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು. [QE][PBR]
3. [QS]ನನ್ನ ಶತ್ರುಗಳು ಹಿಂದಿರುಗಿ ಓಡುವರು; [QE][QS2]ಅವರು ನಿಮ್ಮ ಮುಂದೆ ಎಡವಿಬಿದ್ದು ನಾಶವಾಗುವರು. [QE]
4. [QS]ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು [QE][QS2]ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ. [QE]
5. [QS]ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; [QE][QS2]ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ. [QE]
6. [QS]ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, [QE][QS2]ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; [QE][QS2]ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು. [QE][PBR]
7. [QS]ಯೆಹೋವ ದೇವರು ಸದಾ ಆಳುವವರು; [QE][QS2]ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ. [QE]
8. [QS]ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; [QE][QS2]ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು. [QE]
9. [QS]ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, [QE][QS2]ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು. [QE]
10. [QS]ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, [QE][QS2]ಏಕೆಂದರೆ ಯೆಹೋವ ದೇವರೇ, [QE][QS2]ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ. [QE][PBR]
11. [QS]ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; [QE][QS2]ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ. [QE]
12. [QS]ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; [QE][QS2]ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ. [QE][PBR]
13. [QS]ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. [QE][QS2]ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ. [QE]
14. [QS]ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ [QE][QS2]ನಿಮ್ಮ ಸ್ತುತಿಯನ್ನು ಸಾರುವೆನು. [QE][QS2]ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು. [QE][PBR]
15. [QS]ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; [QE][QS2]ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ. [QE]
16. [QS]ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; [QE][QS2]ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ. [QE]
17. [QS]ದುಷ್ಟರು ಪಾತಾಳಕ್ಕೆ ತಿರುಗುವರು, [QE][QS2]ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು. [QE]
18. [QS]ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; [QE][QS2]ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ. [QE][PBR]
19. [QS]ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; [QE][QS2]ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ. [QE]
20. [QS]ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; [QE][QS2]ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ. [QE]