1. [QS]ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು [QE][QS2]ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು. [QE]
2. [QS]“ನನ್ನ ಆಶ್ರಯವೂ, ನನ್ನ ಕೋಟೆಯೂ, [QE][QS2]ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು.” [QE][PBR]
3. [QS]ನಿಶ್ಚಯವಾಗಿ ದೇವರು ನಿಮ್ಮನ್ನು [QE][QS2]ಬೇಡನ ಉರುಲಿನಿಂದ ರಕ್ಷಿಸುವರು. [QE][QS2]ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು. [QE]
4. [QS]ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. [QE][QS2]ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. [QE][QS2]ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು. [QE]
5. [QS]ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, [QE][QS2]ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ. [QE]
6. [QS]ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. [QE][QS2]ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ. [QE]
7. [QS]ನಿಮ್ಮ ಪಕ್ಕದಲ್ಲಿ ಸಾವಿರ ಜನರು ಬಿದ್ದರೂ [QE][QS2]ನಿಮ್ಮ ಬಲಗಡೆಯಲ್ಲಿ ಹತ್ತು ಸಾವಿರ ಜನರು ಬಿದ್ದಾಗ್ಯೂ, [QE][QS2]ನಿಮ್ಮ ಸಮೀಪಕ್ಕೆ ಅದು ಬರುವುದಿಲ್ಲ. [QE]
8. [QS]ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. [QE][QS2]ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ. [QE][PBR]
9. [QS]“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, [QE][QS2]ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ, [QE]
10. [QS]ಯಾವ ಕೇಡೂ ನಿಮ್ಮನ್ನು ಮುಟ್ಟದು, [QE][QS2]ಯಾವ ವಿಪತ್ತು ನಿಮ್ಮನ್ನು ಸಮೀಪಿಸುವುದಿಲ್ಲ. [QE]
11. [QS]ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ [QE][QS2]ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು. [QE]
12. [QS]ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ [QE][QS2]ದೇವದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು. [QE]
13. [QS]ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. [QE][QS2]ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ. [QE][PBR]
14. [QS]“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. [QE][QS2]ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು. [QE]
15. [QS]ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. [QE][QS2]ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, [QE][QS2]ಆತನನ್ನು ಘನಪಡಿಸುವೆನು. [QE]
16. [QS]ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, [QE][QS2]ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]