ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು. [QE][QS2]ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು. [QE]
2. [QS]ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ [QE][QS2]ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು. [QE]
3. [QS]ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ [QE][QS2]ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು. [QE][PBR]
4. [QS]ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. [QE][QS2]ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ. [QE]
5. [QS]ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. [QE][QS2]ನಿಮ್ಮ ಯೋಚನೆಗಳು ಬಹು ಆಳವಾಗಿವೆ. [QE]
6. [QS]ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು. [QE][QS2]ಮೂರ್ಖನು ಇದನ್ನು ಗ್ರಹಿಸನು. [QE]
7. [QS]ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ [QE][QS2]ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ [QE][QS2]ಅವರು ನಿತ್ಯ ದಂಡನೆಗೆ ಗುರಿಯಾಗುವರು. [QE][PBR]
8. [QS]ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ. [QE][PBR]
9. [QS]ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ, [QE][QS2]ನಿಮ್ಮ ಶತ್ರುಗಳು ನಾಶವಾಗುವರು. [QE][QS2]ಕೇಡು ಮಾಡುವವರೆಲ್ಲರು ಚದರಿಹೋಗುವರು. [QE]
10. [QS]ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. [QE][QS2]ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು. [QE]
11. [QS]ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. [QE][QS2]ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ. [QE][PBR]
12. [QS]ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. [QE][QS2]ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು. [QE]
13. [QS]ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. [QE][QS2]ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು. [QE]
14. [QS]ಮುದಿಪ್ರಾಯದಲ್ಲಿಯೂ ಫಲ ಕೊಡುವರು. [QE][QS2]ಅವರು ಹಸಿರಾಗಿ ಶೋಭಿಸುವರು. [QE]
15. [QS]“ಯೆಹೋವ ದೇವರು ಯಥಾರ್ಥವಂತರೂ [QE][QS2]ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” [QE][QS2]ಎಂದು ನೀತಿವಂತರು ಘೋಷಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 92 / 150
1 ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು. ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು. 2 ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು. 3 ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು. 4 ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ. 5 ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. ನಿಮ್ಮ ಯೋಚನೆಗಳು ಬಹು ಆಳವಾಗಿವೆ. 6 ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು. ಮೂರ್ಖನು ಇದನ್ನು ಗ್ರಹಿಸನು. 7 ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ ಅವರು ನಿತ್ಯ ದಂಡನೆಗೆ ಗುರಿಯಾಗುವರು. 8 ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ. 9 ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ, ನಿಮ್ಮ ಶತ್ರುಗಳು ನಾಶವಾಗುವರು. ಕೇಡು ಮಾಡುವವರೆಲ್ಲರು ಚದರಿಹೋಗುವರು. 10 ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು. 11 ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ. 12 ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು. 13 ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು. 14 ಮುದಿಪ್ರಾಯದಲ್ಲಿಯೂ ಫಲ ಕೊಡುವರು. ಅವರು ಹಸಿರಾಗಿ ಶೋಭಿಸುವರು. 15 “ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 92 / 150
×

Alert

×

Kannada Letters Keypad References