1. [QS]ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. [QE][QS2]ಮುಯ್ಯಿ ತೀರಿಸುವವರು ನೀವೇ; [QE][QS2]ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ. [QE]
2. [QS]ಭೂಲೋಕದ ನ್ಯಾಯಾಧಿಪತಿಯೇ, [QE][QS2]ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ. [QE]
3. [QS]ಯೆಹೋವ ದೇವರೇ, ಎಲ್ಲಿಯವರೆಗೆ? [QE][QS2]ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು? [QE][PBR]
4. [QS]ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. [QE][QS2]ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ. [QE]
5. [QS]ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. [QE][QS2]ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ. [QE]
6. [QS]ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. [QE][QS2]ದಿಕ್ಕಿಲ್ಲದವರನ್ನು ಹತಮಾಡುತ್ತಾರೆ. [QE]
7. [QS]“ಯೆಹೋವ ದೇವರು ನೋಡುವುದಿಲ್ಲ, [QE][QS2]ಯಾಕೋಬನ ದೇವರು ಗ್ರಹಿಸುವುದಿಲ್ಲ,” [QE][QS2]ಎಂದು ಅವರು ಹೇಳುತ್ತಾರೆ. [QE][PBR]
8. [QS]ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. [QE][QS2]ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ? [QE]
9. [QS]ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ? [QE][QS2]ಕಣ್ಣನ್ನು ರೂಪಿಸಿದವರು ನೋಡುವುದಿಲ್ಲವೇ? [QE]
10. [QS]ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? [QE][QS2]ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ? [QE]
11. [QS]ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು [QE][QS2]ಯೆಹೋವ ದೇವರು ತಿಳಿದುಕೊಳ್ಳುತ್ತಾರೆ. [QE][PBR]
12. [QS]ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. [QE][QS2]ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು. [QE]
13. [QS]ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ [QE][QS2]ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ. [QE]
14. [QS]ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. [QE][QS2]ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ. [QE]
15. [QS]ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; [QE][QS2]ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು. [QE][PBR]
16. [QS]ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? [QE][QS2]ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು? [QE]
17. [QS]ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, [QE][QS2]ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು. [QE]
18. [QS]“ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, [QE][QS2]ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು. [QE]
19. [QS]ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, [QE][QS2]ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ. [QE][PBR]
20. [QS]ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು [QE][QS2]ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ? [QE]
21. [QS]ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; [QE][QS2]ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ. [QE]
22. [QS]ಆದರೆ ಯೆಹೋವ ದೇವರು ನನಗೆ ದುರ್ಗವೂ, [QE][QS2]ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ. [QE]
23. [QS]ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; [QE][QS2]ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; [QE][QS2]ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು. [QE]