ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; [QE][QS2]ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ. [QE]
2. [QS]ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ; [QE][QS2]ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ. [QE]
3. [QS]ಜನಾಂಗಗಳಲ್ಲಿ ಅವರ ಘನತೆಯನ್ನೂ, [QE][QS2]ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ. [QE][PBR]
4. [QS]ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; [QE][QS2]ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ. [QE]
5. [QS]ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; [QE][QS2]ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು. [QE]
6. [QS]ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; [QE][QS2]ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ. [QE][PBR]
7. [QS]ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ [QE][QS2]ಬಲವನ್ನೂ ಅರ್ಪಿಸಿರಿ. [QE]
8. [QS]ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; [QE][QS2]ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ. [QE]
9. [QS]ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; [QE][QS2]ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. [QE]
10. [QS]“ಯೆಹೋವ ದೇವರು ಆಳಿಕೆ ಮಾಡುತ್ತಾರೆ; [QE][QS2]ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; [QE][QS2]ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ. [QE][PBR]
11. [QS]ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; [QE][QS2]ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. [QE]
12. [QS]ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; [QE][QS2]ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. [QE]
13. [QS]ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, [QE][QS2]ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; [QE][QS]ಜನರಿಗೆ ತಮ್ಮ ಸತ್ಯದಿಂದಲೂ [QE][QS2]ನ್ಯಾಯತೀರಿಸಲು ಬರುತ್ತಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 96 / 150
1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ. 2 ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ; ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ. 3 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ. 4 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ. 5 ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು. 6 ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ. 7 ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ. 8 ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ. 9 ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. 10 “ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ. 11 ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. 12 ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. 13 ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 96 / 150
×

Alert

×

Kannada Letters Keypad References