ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; [QE][QS2]ದ್ವೀಪಗಳ ಸಮೂಹವು ಸಂತೋಷಪಡಲಿ. [QE]
2. [QS]ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; [QE][QS2]ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ. [QE]
3. [QS]ಬೆಂಕಿಯು ಅವರ ಮುಂದೆ ಹೋಗಿ [QE][QS2]ಅವರ ವೈರಿಗಳನ್ನು ಸುತ್ತಲೂ ದಹಿಸುವುದು. [QE]
4. [QS]ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; [QE][QS2]ಭೂಮಿಯು ಕಂಡು ನಡುಗುತ್ತದೆ. [QE]
5. [QS]ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, [QE][QS2]ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ. [QE]
6. [QS]ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; [QE][QS2]ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ. [QE][PBR]
7. [QS]ವಿಗ್ರಹಗಳನ್ನು ಪೂಜಿಸಿ, [QE][QS2]ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; [QE][QS2]ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ! [QE][PBR]
8. [QS]ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು [QE][QS2]ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; [QE][QS2]ಯೆಹೂದದ ಪುತ್ರಿಯರು[* ಯೆಹೂದದ ಪುತ್ರಿಯರು ಅಂದರೆ, ಚೀಯೋನಿನ ಸುತ್ತಲಿನ ಹಳ್ಳಿಗಳು ] ಸಹ ಉಲ್ಲಾಸಿಸುತ್ತಾರೆ. [QE]
9. [QS]ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; [QE][QS2]ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ. [QE]
10. [QS]ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; [QE][QS2]ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, [QE][QS2]ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು. [QE]
11. [QS]ನೀತಿವಂತನಿಗೋಸ್ಕರ ಬೆಳಕೂ, [QE][QS2]ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು. [QE]
12. [QS]ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; [QE][QS2]ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 97 / 150
1 ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ. 2 ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ. 3 ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು. 4 ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ಕಂಡು ನಡುಗುತ್ತದೆ. 5 ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ. 6 ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ. 7 ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ! 8 ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; ಯೆಹೂದದ ಪುತ್ರಿಯರು* ಯೆಹೂದದ ಪುತ್ರಿಯರು ಅಂದರೆ, ಚೀಯೋನಿನ ಸುತ್ತಲಿನ ಹಳ್ಳಿಗಳು ಸಹ ಉಲ್ಲಾಸಿಸುತ್ತಾರೆ. 9 ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ. 10 ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು. 11 ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು. 12 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 97 / 150
×

Alert

×

Kannada Letters Keypad References