ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; [QE][QS2]ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; [QE][QS]ಅವರ ಬಲಗೈಯೂ, ಅವರ ಪರಿಶುದ್ಧ ಭುಜವು [QE][QS2]ಅವರಿಗೆ ಜಯವನ್ನು ತಂದಿವೆ. [QE]
2. [QS]ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; [QE][QS2]ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ. [QE]
3. [QS]ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ [QE][QS2]ಜ್ಞಾಪಕ ಮಾಡಿಕೊಂಡಿದ್ದಾರೆ; [QE][QS]ಭೂಮಿಯ ಅಂತ್ಯಗಳಲ್ಲೆವೂ [QE][QS2]ನಮ್ಮ ದೇವರ ರಕ್ಷಣೆಯನ್ನು ನೋಡಿವೆ. [QE][PBR]
4. [QS]ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. [QE][QS2]ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ. [QE]
5. [QS]ಯೆಹೋವ ದೇವರಿಗೆ ಕಿನ್ನರಿಯಿಂದ ಗಾನಮಾಡಿರಿ. [QE][QS2]ಕಿನ್ನರಿಯಿಂದಲೂ, ಕೀರ್ತನೆಯ ಶಬ್ದದಿಂದಲೂ ಹಾಡಿರಿ. [QE]
6. [QS]ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ [QE][QS2]ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ. [QE][PBR]
7. [QS]ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, [QE][QS2]ಅದರ ನಿವಾಸಿಗಳೂ ಪ್ರತಿಧ್ವನಿಸಲಿ. [QE]
8. [QS]ನದಿಗಳು ಚಪ್ಪಾಳೆ ತಟ್ಟಲಿ. [QE][QS2]ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ. [QE]
9. [QS]ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ [QE][QS2]ನ್ಯಾಯತೀರಿಸಲು ಬರುತ್ತಾರೆ. [QE][QS]ಅವರು ಲೋಕಕ್ಕೆ ನೀತಿಗನುಸಾರವಾಗಿಯೂ [QE][QS2]ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ. 2 ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ. 3 ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. 4 ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ. 5 ಯೆಹೋವ ದೇವರಿಗೆ ಕಿನ್ನರಿಯಿಂದ ಗಾನಮಾಡಿರಿ. ಕಿನ್ನರಿಯಿಂದಲೂ, ಕೀರ್ತನೆಯ ಶಬ್ದದಿಂದಲೂ ಹಾಡಿರಿ. 6 ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ. 7 ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ. 8 ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ. 9 ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
×

Alert

×

Kannada Letters Keypad References