ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರು ಆಳಿಕೆ ಮಾಡುತ್ತಾರೆ. [QE][QS2]ರಾಷ್ಟ್ರಗಳು ನಡುಗಲಿ. [QE][QS]ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. [QE][QS2]ಭೂಮಿಯು ಕದಲಲಿ. [QE]
2. [QS]ಯೆಹೋವ ದೇವರು ಚೀಯೋನಿನಲ್ಲಿ ಮಹೋನ್ನತರಾಗಿದ್ದಾರೆ. [QE][QS2]ಎಲ್ಲಾ ಜನಗಳ ಮೇಲೆ ಉನ್ನತರಾಗಿದ್ದಾರೆ. [QE]
3. [QS]ನಿಮ್ಮ ಅತಿಶಯವಾದ ಹೆಸರನ್ನು ಜನರು ಕೊಂಡಾಡಲಿ. [QE][QS2]ದೇವರು ಪರಿಶುದ್ಧರು. [QE][PBR]
4. [QS]ನ್ಯಾಯ ಪ್ರಿಯ ರಾಜರೇ, [QE][QS2]ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. [QE][QS]ನ್ಯಾಯವನ್ನೂ ನೀತಿಯನ್ನೂ [QE][QS2]ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ. [QE]
5. [QS]ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. [QE][QS2]ಅವರ ಪಾದಪೀಠದಲ್ಲಿ ಆರಾಧಿಸಿರಿ. [QE][QS2]ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ. [QE][PBR]
6. [QS]ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. [QE][QS2]ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. [QE][QS]ಇವರೆಲ್ಲರೂ ಯೆಹೋವ ದೇವರನ್ನು ಕರೆದರು. [QE][QS2]ದೇವರು ಅವರಿಗೆ ಉತ್ತರಕೊಟ್ಟರು. [QE]
7. [QS]ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. [QE][QS2]ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು. [QE][PBR]
8. [QS]ನಮ್ಮ ದೇವರಾದ ಯೆಹೋವ ದೇವರೇ, [QE][QS2]ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. [QE][QS]ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ [QE][QS2]ಅವರನ್ನು ಕ್ಷಮಿಸುವ ದೇವರಾಗಿದ್ದೀರಿ. [QE]
9. [QS]ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. [QE][QS2]ದೇವರ ಪರಿಶುದ್ಧ ಪರ್ವತದಲ್ಲಿ ಆರಾಧಿಸಿರಿ. [QE][QS2]ನಮ್ಮ ದೇವರಾದ ಯೆಹೋವ ದೇವರು ಪರಿಶುದ್ಧರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
1 ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ. 2 ಯೆಹೋವ ದೇವರು ಚೀಯೋನಿನಲ್ಲಿ ಮಹೋನ್ನತರಾಗಿದ್ದಾರೆ. ಎಲ್ಲಾ ಜನಗಳ ಮೇಲೆ ಉನ್ನತರಾಗಿದ್ದಾರೆ. 3 ನಿಮ್ಮ ಅತಿಶಯವಾದ ಹೆಸರನ್ನು ಜನರು ಕೊಂಡಾಡಲಿ. ದೇವರು ಪರಿಶುದ್ಧರು. 4 ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ. 5 ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ. 6 ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು. 7 ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು. 8 ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ. 9 ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ದೇವರ ಪರಿಶುದ್ಧ ಪರ್ವತದಲ್ಲಿ ಆರಾಧಿಸಿರಿ. ನಮ್ಮ ದೇವರಾದ ಯೆಹೋವ ದೇವರು ಪರಿಶುದ್ಧರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
×

Alert

×

Kannada Letters Keypad References