ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆರೆಮಿಯ
1. ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
2. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
3. ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
4. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
5. ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
6. ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
7. ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
8. ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
9. ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
10. ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
11. ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
12. ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
13. ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.
14. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
15. ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
16. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.
17. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 52
1 ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ -- 2 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. 3 ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. 4 ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು. 5 ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ-- 6 ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. 7 ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. 8 ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು. 9 ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು. 10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು. 11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು. 12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- 13 ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. 14 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ. 15 ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. 16 ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು. 17 ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 52
×

Alert

×

Kannada Letters Keypad References