ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
2. ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
3. ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
4. ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
5. ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
6. ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
7. ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
8. ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
9. ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
10. ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.
11. ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
12. ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
13. ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.
14. ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 150
ಕೀರ್ತನೆಗಳು 27:169
1 ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? 2 ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. 3 ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು. 4 ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ. 5 ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು. 6 ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು. 7 ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು. 8 ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು. 9 ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ. 10 ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ. 11 ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು. 12 ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ. 13 ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು. 14 ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 150
Common Bible Languages
West Indian Languages
×

Alert

×

kannada Letters Keypad References