ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಜೆಕರ್ಯ
1. ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
2. ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
3. ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
4. ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
5. ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
6. ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
7. ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
8. ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
9. ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
10. ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
11. ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
12. ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
13. ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
14. ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
15. ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
16. ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.
17. ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

ಟಿಪ್ಪಣಿಗಳು

No Verse Added

ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 14
1 2 3 4 5 6 7 8 9 10 11 12 13 14
ಜೆಕರ್ಯ 11:10
1 ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. 2 ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ. 3 ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ. 4 ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು. 5 ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ. 6 ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ. 7 ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು. 8 ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು. 9 ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ. 10 ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು, 11 ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು. 12 ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. 13 ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು. 14 ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು. 15 ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ. 16 ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು. 17 ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 14
1 2 3 4 5 6 7 8 9 10 11 12 13 14
Common Bible Languages
West Indian Languages
×

Alert

×

kannada Letters Keypad References