1. ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
|
2. ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
|
4. ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
|
6. ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
|
8. ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
|
13. ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
|
16. ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
|
17. ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
|
18. ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
|
22. ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
|
23. ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
|
24. ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
|
27. ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
|
30. ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
|
33. ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
|
34. ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
|
35. ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
|