2. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
|
3. ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
|
4. ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
|
6. ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
|
13. ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
|
14. ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
|
15. ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
|
16. ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
|
20. ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
|
29. ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
|
35. ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
|