2. ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
|
4. ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
|
8. ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
|
9. ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
|
13. ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
|
26. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
|
27. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
|