ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
2. ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
3. ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
4. ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
5. ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
6. ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
7. ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.
8. ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
9. ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.
10. ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
1 ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು. 2 ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ. 3 ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ. 4 ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ. 5 ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು. 6 ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ. 7 ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು. 8 ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ. 9 ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ. 10 ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
×

Alert

×

Kannada Letters Keypad References