1. ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
|
2. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
|
3. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
|
4. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
|
5. ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
|
6. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
|
7. ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.
|
8. ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
|
10. ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.
|
11. ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
|
12. ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
|
14. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
|
15. ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
|
16. ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
|
17. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.
|