ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಪ್ರಕಟನೆ
1. ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
2. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
3. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
4. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
5. ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
6. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
7. ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
8. ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
9. ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
10. ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
11. ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
12. ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
13. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
14. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
15. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
16. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
17. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
18. ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
19. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
20. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ
21. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

ಟಿಪ್ಪಣಿಗಳು

No Verse Added

ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 22
ಪ್ರಕಟನೆ 19
1 ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. 2 ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. 3 ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. 4 ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. 5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. 6 ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ. 7 ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. 8 ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ. 9 ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು. 10 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ 11 ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; 12 ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. 13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. 14 ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. 15 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. 16 ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. 17 ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, 18 ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. 19 ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. 20 ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ 21 ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 22
Common Bible Languages
West Indian Languages
×

Alert

×

kannada Letters Keypad References