ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಮತ್ತಾಯನು
1. ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
2. ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
3. ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
4. ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
5. ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
6. ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
7. ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
8. ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
9. ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.
10. ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
11. ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
12. ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.
13. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
14. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
15. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
16. ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
17. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
18. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
19. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
20. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
21. ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
22. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
23. ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
24. ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
25. ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
26. ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
27. ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
28. ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
29. ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
30. ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
31. ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
32. ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
33. ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
34. ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
35. ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
36. ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
37. ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
38. ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
39. ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
40. ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
41. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
42. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ಟಿಪ್ಪಣಿಗಳು

No Verse Added

ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 28
ಮತ್ತಾಯನು 10:4
1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು. 2 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, 3 ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, 4 ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ. 5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ. 6 ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ. 7 ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ. 8 ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ. 9 ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ. 10 ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. 11 ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ; 12 ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. 13 ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ. 14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ. 15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು. 16 ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ. 17 ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು. 18 ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. 19 ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. 20 ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ. 21 ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. 22 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು. 23 ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 24 ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ. 25 ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ? 26 ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ. 27 ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ. 28 ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ. 29 ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ. 30 ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ. 31 ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ. 32 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು; 33 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು. 34 ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ; 35 ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ. 36 ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು. 37 ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ. 38 ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ. 39 ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು. 40 ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. 41 ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು. 42 ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 28
Common Bible Languages
West Indian Languages
×

Alert

×

kannada Letters Keypad References