ಆದಿಕಾಂಡ 17 : 1 (KNV)
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಆದಿಕಾಂಡ 17 : 2 (KNV)
ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
ಆದಿಕಾಂಡ 17 : 3 (KNV)
ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
ಆದಿಕಾಂಡ 17 : 4 (KNV)
ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.
ಆದಿಕಾಂಡ 17 : 5 (KNV)
ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
ಆದಿಕಾಂಡ 17 : 6 (KNV)
ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
ಆದಿಕಾಂಡ 17 : 7 (KNV)
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಆದಿಕಾಂಡ 17 : 8 (KNV)
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್‌ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ಆದಿಕಾಂಡ 17 : 9 (KNV)
ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
ಆದಿಕಾಂಡ 17 : 10 (KNV)
ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
ಆದಿಕಾಂಡ 17 : 11 (KNV)
ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
ಆದಿಕಾಂಡ 17 : 12 (KNV)
ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
ಆದಿಕಾಂಡ 17 : 13 (KNV)
ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
ಆದಿಕಾಂಡ 17 : 14 (KNV)
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಆದಿಕಾಂಡ 17 : 15 (KNV)
ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
ಆದಿಕಾಂಡ 17 : 16 (KNV)
ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
ಆದಿಕಾಂಡ 17 : 17 (KNV)
ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
ಆದಿಕಾಂಡ 17 : 18 (KNV)
ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
ಆದಿಕಾಂಡ 17 : 19 (KNV)
ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
ಆದಿಕಾಂಡ 17 : 20 (KNV)
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
ಆದಿಕಾಂಡ 17 : 21 (KNV)
ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
ಆದಿಕಾಂಡ 17 : 22 (KNV)
ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
ಆದಿಕಾಂಡ 17 : 23 (KNV)
ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
ಆದಿಕಾಂಡ 17 : 24 (KNV)
ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
ಆದಿಕಾಂಡ 17 : 25 (KNV)
ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.
ಆದಿಕಾಂಡ 17 : 26 (KNV)
ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
ಆದಿಕಾಂಡ 17 : 27 (KNV)
ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27

BG:

Opacity:

Color:


Size:


Font: