ಆದಿಕಾಂಡ 2 : 1 (KNV)
ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
ಆದಿಕಾಂಡ 2 : 2 (KNV)
ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ಆದಿಕಾಂಡ 2 : 3 (KNV)
ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ಆದಿಕಾಂಡ 2 : 4 (KNV)
ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
ಆದಿಕಾಂಡ 2 : 5 (KNV)
ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
ಆದಿಕಾಂಡ 2 : 6 (KNV)
ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
ಆದಿಕಾಂಡ 2 : 7 (KNV)
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ಆದಿಕಾಂಡ 2 : 8 (KNV)
ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
ಆದಿಕಾಂಡ 2 : 9 (KNV)
ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
ಆದಿಕಾಂಡ 2 : 10 (KNV)
ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
ಆದಿಕಾಂಡ 2 : 11 (KNV)
ಮೊದಲನೆಯದರ ಹೆಸರು ಪೀಶೋನ್‌; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
ಆದಿಕಾಂಡ 2 : 12 (KNV)
ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
ಆದಿಕಾಂಡ 2 : 13 (KNV)
ಎರಡನೆಯ ನದಿಯ ಹೆಸರು ಗೀಹೋನ್‌; ಅದು ಕೂಷ್‌ ದೇಶವನ್ನೆಲ್ಲಾ ಸುತ್ತುವದು.
ಆದಿಕಾಂಡ 2 : 14 (KNV)
ಮೂರನೆಯ ನದಿಯ ಹೆಸರು ಹಿದ್ದೆಕೆಲ್‌; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್‌.
ಆದಿಕಾಂಡ 2 : 15 (KNV)
ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
ಆದಿಕಾಂಡ 2 : 16 (KNV)
ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
ಆದಿಕಾಂಡ 2 : 17 (KNV)
ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
ಆದಿಕಾಂಡ 2 : 18 (KNV)
ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
ಆದಿಕಾಂಡ 2 : 19 (KNV)
ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
ಆದಿಕಾಂಡ 2 : 20 (KNV)
ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
ಆದಿಕಾಂಡ 2 : 21 (KNV)
ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
ಆದಿಕಾಂಡ 2 : 22 (KNV)
ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
ಆದಿಕಾಂಡ 2 : 23 (KNV)
ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
ಆದಿಕಾಂಡ 2 : 24 (KNV)
ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ಆದಿಕಾಂಡ 2 : 25 (KNV)
ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: