ಆದಿಕಾಂಡ 21 : 1 (KNV)
ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
ಆದಿಕಾಂಡ 21 : 2 (KNV)
ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
ಆದಿಕಾಂಡ 21 : 3 (KNV)
ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
ಆದಿಕಾಂಡ 21 : 4 (KNV)
ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
ಆದಿಕಾಂಡ 21 : 5 (KNV)
ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
ಆದಿಕಾಂಡ 21 : 6 (KNV)
ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
ಆದಿಕಾಂಡ 21 : 7 (KNV)
ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
ಆದಿಕಾಂಡ 21 : 8 (KNV)
ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
ಆದಿಕಾಂಡ 21 : 9 (KNV)
ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
ಆದಿಕಾಂಡ 21 : 10 (KNV)
ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
ಆದಿಕಾಂಡ 21 : 11 (KNV)
ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
ಆದಿಕಾಂಡ 21 : 12 (KNV)
ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
ಆದಿಕಾಂಡ 21 : 13 (KNV)
ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
ಆದಿಕಾಂಡ 21 : 14 (KNV)
ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
ಆದಿಕಾಂಡ 21 : 15 (KNV)
ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
ಆದಿಕಾಂಡ 21 : 16 (KNV)
ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
ಆದಿಕಾಂಡ 21 : 17 (KNV)
ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
ಆದಿಕಾಂಡ 21 : 18 (KNV)
ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
ಆದಿಕಾಂಡ 21 : 19 (KNV)
ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
ಆದಿಕಾಂಡ 21 : 20 (KNV)
ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
ಆದಿಕಾಂಡ 21 : 21 (KNV)
ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
ಆದಿಕಾಂಡ 21 : 22 (KNV)
ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
ಆದಿಕಾಂಡ 21 : 23 (KNV)
ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
ಆದಿಕಾಂಡ 21 : 24 (KNV)
ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
ಆದಿಕಾಂಡ 21 : 25 (KNV)
ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
ಆದಿಕಾಂಡ 21 : 26 (KNV)
ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
ಆದಿಕಾಂಡ 21 : 27 (KNV)
ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
ಆದಿಕಾಂಡ 21 : 28 (KNV)
ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
ಆದಿಕಾಂಡ 21 : 29 (KNV)
ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
ಆದಿಕಾಂಡ 21 : 30 (KNV)
ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
ಆದಿಕಾಂಡ 21 : 31 (KNV)
ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
ಆದಿಕಾಂಡ 21 : 32 (KNV)
ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
ಆದಿಕಾಂಡ 21 : 33 (KNV)
ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ಆದಿಕಾಂಡ 21 : 34 (KNV)
ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: