ಆದಿಕಾಂಡ 23 : 1 (KNV)
ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.
ಆದಿಕಾಂಡ 23 : 2 (KNV)
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
ಆದಿಕಾಂಡ 23 : 3 (KNV)
ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
ಆದಿಕಾಂಡ 23 : 4 (KNV)
ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
ಆದಿಕಾಂಡ 23 : 5 (KNV)
ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
ಆದಿಕಾಂಡ 23 : 6 (KNV)
ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
ಆದಿಕಾಂಡ 23 : 7 (KNV)
ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
ಆದಿಕಾಂಡ 23 : 8 (KNV)
ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
ಆದಿಕಾಂಡ 23 : 9 (KNV)
ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
ಆದಿಕಾಂಡ 23 : 10 (KNV)
ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
ಆದಿಕಾಂಡ 23 : 11 (KNV)
ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
ಆದಿಕಾಂಡ 23 : 12 (KNV)
ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
ಆದಿಕಾಂಡ 23 : 13 (KNV)
ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
ಆದಿಕಾಂಡ 23 : 14 (KNV)
ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
ಆದಿಕಾಂಡ 23 : 15 (KNV)
ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
ಆದಿಕಾಂಡ 23 : 16 (KNV)
ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
ಆದಿಕಾಂಡ 23 : 17 (KNV)
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
ಆದಿಕಾಂಡ 23 : 18 (KNV)
ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
ಆದಿಕಾಂಡ 23 : 19 (KNV)
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.
ಆದಿಕಾಂಡ 23 : 20 (KNV)
ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
❮
❯