ಆದಿಕಾಂಡ 30 : 1 (KNV)
ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
ಆದಿಕಾಂಡ 30 : 2 (KNV)
ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
ಆದಿಕಾಂಡ 30 : 3 (KNV)
ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
ಆದಿಕಾಂಡ 30 : 4 (KNV)
ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
ಆದಿಕಾಂಡ 30 : 5 (KNV)
ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
ಆದಿಕಾಂಡ 30 : 6 (KNV)
ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 7 (KNV)
ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 8 (KNV)
ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
ಆದಿಕಾಂಡ 30 : 9 (KNV)
ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
ಆದಿಕಾಂಡ 30 : 10 (KNV)
ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
ಆದಿಕಾಂಡ 30 : 11 (KNV)
ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 12 (KNV)
ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 13 (KNV)
ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 14 (KNV)
ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
ಆದಿಕಾಂಡ 30 : 15 (KNV)
ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
ಆದಿಕಾಂಡ 30 : 16 (KNV)
ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
ಆದಿಕಾಂಡ 30 : 17 (KNV)
ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 18 (KNV)
ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
ಆದಿಕಾಂಡ 30 : 19 (KNV)
ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
ಆದಿಕಾಂಡ 30 : 20 (KNV)
ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 21 (KNV)
ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
ಆದಿಕಾಂಡ 30 : 22 (KNV)
ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
ಆದಿಕಾಂಡ 30 : 23 (KNV)
ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
ಆದಿಕಾಂಡ 30 : 24 (KNV)
ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
ಆದಿಕಾಂಡ 30 : 25 (KNV)
ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
ಆದಿಕಾಂಡ 30 : 26 (KNV)
ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
ಆದಿಕಾಂಡ 30 : 27 (KNV)
ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
ಆದಿಕಾಂಡ 30 : 28 (KNV)
ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
ಆದಿಕಾಂಡ 30 : 29 (KNV)
ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
ಆದಿಕಾಂಡ 30 : 30 (KNV)
ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
ಆದಿಕಾಂಡ 30 : 31 (KNV)
ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
ಆದಿಕಾಂಡ 30 : 32 (KNV)
ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
ಆದಿಕಾಂಡ 30 : 33 (KNV)
ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
ಆದಿಕಾಂಡ 30 : 34 (KNV)
ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
ಆದಿಕಾಂಡ 30 : 35 (KNV)
ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
ಆದಿಕಾಂಡ 30 : 36 (KNV)
ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
ಆದಿಕಾಂಡ 30 : 37 (KNV)
ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
ಆದಿಕಾಂಡ 30 : 38 (KNV)
ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
ಆದಿಕಾಂಡ 30 : 39 (KNV)
ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
ಆದಿಕಾಂಡ 30 : 40 (KNV)
ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
ಆದಿಕಾಂಡ 30 : 41 (KNV)
ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
ಆದಿಕಾಂಡ 30 : 42 (KNV)
ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.
ಆದಿಕಾಂಡ 30 : 43 (KNV)
ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
❮
❯