ಆದಿಕಾಂಡ 34 : 1 (KNV)
ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
ಆದಿಕಾಂಡ 34 : 2 (KNV)
ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
ಆದಿಕಾಂಡ 34 : 3 (KNV)
ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
ಆದಿಕಾಂಡ 34 : 4 (KNV)
ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
ಆದಿಕಾಂಡ 34 : 5 (KNV)
ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
ಆದಿಕಾಂಡ 34 : 6 (KNV)
ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.
ಆದಿಕಾಂಡ 34 : 7 (KNV)
ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
ಆದಿಕಾಂಡ 34 : 8 (KNV)
ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
ಆದಿಕಾಂಡ 34 : 9 (KNV)
ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
ಆದಿಕಾಂಡ 34 : 10 (KNV)
ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
ಆದಿಕಾಂಡ 34 : 11 (KNV)
ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
ಆದಿಕಾಂಡ 34 : 12 (KNV)
ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
ಆದಿಕಾಂಡ 34 : 13 (KNV)
ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
ಆದಿಕಾಂಡ 34 : 14 (KNV)
ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
ಆದಿಕಾಂಡ 34 : 15 (KNV)
ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
ಆದಿಕಾಂಡ 34 : 16 (KNV)
ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
ಆದಿಕಾಂಡ 34 : 17 (KNV)
ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.
ಆದಿಕಾಂಡ 34 : 18 (KNV)
ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
ಆದಿಕಾಂಡ 34 : 19 (KNV)
ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
ಆದಿಕಾಂಡ 34 : 20 (KNV)
ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
ಆದಿಕಾಂಡ 34 : 21 (KNV)
ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
ಆದಿಕಾಂಡ 34 : 22 (KNV)
ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
ಆದಿಕಾಂಡ 34 : 23 (KNV)
ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
ಆದಿಕಾಂಡ 34 : 24 (KNV)
ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
ಆದಿಕಾಂಡ 34 : 25 (KNV)
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
ಆದಿಕಾಂಡ 34 : 26 (KNV)
ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
ಆದಿಕಾಂಡ 34 : 27 (KNV)
ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
ಆದಿಕಾಂಡ 34 : 28 (KNV)
ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.
ಆದಿಕಾಂಡ 34 : 29 (KNV)
ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.
ಆದಿಕಾಂಡ 34 : 30 (KNV)
ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.
ಆದಿಕಾಂಡ 34 : 31 (KNV)
ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
❮
❯