ಆದಿಕಾಂಡ 37 : 1 (KNV)
ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್‌ ದೇಶದಲ್ಲಿ ವಾಸ ವಾಗಿದ್ದನು.
ಆದಿಕಾಂಡ 37 : 2 (KNV)
ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
ಆದಿಕಾಂಡ 37 : 3 (KNV)
ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
ಆದಿಕಾಂಡ 37 : 4 (KNV)
ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
ಆದಿಕಾಂಡ 37 : 5 (KNV)
ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
ಆದಿಕಾಂಡ 37 : 6 (KNV)
ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.
ಆದಿಕಾಂಡ 37 : 7 (KNV)
ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
ಆದಿಕಾಂಡ 37 : 8 (KNV)
ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
ಆದಿಕಾಂಡ 37 : 9 (KNV)
ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
ಆದಿಕಾಂಡ 37 : 10 (KNV)
ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
ಆದಿಕಾಂಡ 37 : 11 (KNV)
ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ಆದಿಕಾಂಡ 37 : 12 (KNV)
ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
ಆದಿಕಾಂಡ 37 : 13 (KNV)
ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
ಆದಿಕಾಂಡ 37 : 14 (KNV)
ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
ಆದಿಕಾಂಡ 37 : 15 (KNV)
ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
ಆದಿಕಾಂಡ 37 : 16 (KNV)
ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
ಆದಿಕಾಂಡ 37 : 17 (KNV)
ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
ಆದಿಕಾಂಡ 37 : 18 (KNV)
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಆದಿಕಾಂಡ 37 : 19 (KNV)
ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;
ಆದಿಕಾಂಡ 37 : 20 (KNV)
ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಆದಿಕಾಂಡ 37 : 21 (KNV)
ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.
ಆದಿಕಾಂಡ 37 : 22 (KNV)
ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.
ಆದಿಕಾಂಡ 37 : 23 (KNV)
ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.
ಆದಿಕಾಂಡ 37 : 24 (KNV)
ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.
ಆದಿಕಾಂಡ 37 : 25 (KNV)
ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
ಆದಿಕಾಂಡ 37 : 26 (KNV)
ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
ಆದಿಕಾಂಡ 37 : 27 (KNV)
ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
ಆದಿಕಾಂಡ 37 : 28 (KNV)
ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
ಆದಿಕಾಂಡ 37 : 29 (KNV)
ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
ಆದಿಕಾಂಡ 37 : 30 (KNV)
ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
ಆದಿಕಾಂಡ 37 : 31 (KNV)
ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ
ಆದಿಕಾಂಡ 37 : 32 (KNV)
ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
ಆದಿಕಾಂಡ 37 : 33 (KNV)
ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
ಆದಿಕಾಂಡ 37 : 34 (KNV)
ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
ಆದಿಕಾಂಡ 37 : 35 (KNV)
ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಆದಿಕಾಂಡ 37 : 36 (KNV)
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: