ಆದಿಕಾಂಡ 40 : 1 (KNV)
ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
ಆದಿಕಾಂಡ 40 : 2 (KNV)
ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
ಆದಿಕಾಂಡ 40 : 3 (KNV)
ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
ಆದಿಕಾಂಡ 40 : 4 (KNV)
ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
ಆದಿಕಾಂಡ 40 : 5 (KNV)
ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
ಆದಿಕಾಂಡ 40 : 6 (KNV)
ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
ಆದಿಕಾಂಡ 40 : 7 (KNV)
ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
ಆದಿಕಾಂಡ 40 : 8 (KNV)
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ಆದಿಕಾಂಡ 40 : 9 (KNV)
ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
ಆದಿಕಾಂಡ 40 : 10 (KNV)
ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
ಆದಿಕಾಂಡ 40 : 11 (KNV)
ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
ಆದಿಕಾಂಡ 40 : 12 (KNV)
ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
ಆದಿಕಾಂಡ 40 : 13 (KNV)
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
ಆದಿಕಾಂಡ 40 : 14 (KNV)
ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
ಆದಿಕಾಂಡ 40 : 15 (KNV)
ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
ಆದಿಕಾಂಡ 40 : 16 (KNV)
ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
ಆದಿಕಾಂಡ 40 : 17 (KNV)
ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
ಆದಿಕಾಂಡ 40 : 18 (KNV)
ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
ಆದಿಕಾಂಡ 40 : 19 (KNV)
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
ಆದಿಕಾಂಡ 40 : 20 (KNV)
ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
ಆದಿಕಾಂಡ 40 : 21 (KNV)
ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
ಆದಿಕಾಂಡ 40 : 22 (KNV)
ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.
ಆದಿಕಾಂಡ 40 : 23 (KNV)
ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
❮
❯