ಆದಿಕಾಂಡ 5 : 1 (KNV)
ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
ಆದಿಕಾಂಡ 5 : 2 (KNV)
ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
ಆದಿಕಾಂಡ 5 : 3 (KNV)
ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
ಆದಿಕಾಂಡ 5 : 4 (KNV)
ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಆದಿಕಾಂಡ 5 : 5 (KNV)
ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
ಆದಿಕಾಂಡ 5 : 6 (KNV)
ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು.
ಆದಿಕಾಂಡ 5 : 7 (KNV)
ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಆದಿಕಾಂಡ 5 : 8 (KNV)
ಸೇತನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಹನ್ನೆರಡು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
ಆದಿಕಾಂಡ 5 : 9 (KNV)
ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು.
ಆದಿಕಾಂಡ 5 : 10 (KNV)
ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಆದಿಕಾಂಡ 5 : 11 (KNV)
ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
ಆದಿಕಾಂಡ 5 : 12 (KNV)
ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು.
ಆದಿಕಾಂಡ 5 : 13 (KNV)
ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಆದಿಕಾಂಡ 5 : 14 (KNV)
ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
ಆದಿಕಾಂಡ 5 : 15 (KNV)
ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು.
ಆದಿಕಾಂಡ 5 : 16 (KNV)
ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
ಆದಿಕಾಂಡ 5 : 17 (KNV)
ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
ಆದಿಕಾಂಡ 5 : 18 (KNV)
ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು.
ಆದಿಕಾಂಡ 5 : 19 (KNV)
ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
ಆದಿಕಾಂಡ 5 : 20 (KNV)
ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
ಆದಿಕಾಂಡ 5 : 21 (KNV)
ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು.
ಆದಿಕಾಂಡ 5 : 22 (KNV)
ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಆದಿಕಾಂಡ 5 : 23 (KNV)
ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು.
ಆದಿಕಾಂಡ 5 : 24 (KNV)
ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
ಆದಿಕಾಂಡ 5 : 25 (KNV)
ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು.
ಆದಿಕಾಂಡ 5 : 26 (KNV)
ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
ಆದಿಕಾಂಡ 5 : 27 (KNV)
ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
ಆದಿಕಾಂಡ 5 : 28 (KNV)
ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.
ಆದಿಕಾಂಡ 5 : 29 (KNV)
ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
ಆದಿಕಾಂಡ 5 : 30 (KNV)
ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಆದಿಕಾಂಡ 5 : 31 (KNV)
ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.
ಆದಿಕಾಂಡ 5 : 32 (KNV)
ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: