2 ಸಮುವೇಲನು 22 : 1 (KNV)
ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
2 ಸಮುವೇಲನು 22 : 2 (KNV)
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ.
2 ಸಮುವೇಲನು 22 : 3 (KNV)
ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
2 ಸಮುವೇಲನು 22 : 4 (KNV)
ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
2 ಸಮುವೇಲನು 22 : 5 (KNV)
ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
2 ಸಮುವೇಲನು 22 : 6 (KNV)
ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
2 ಸಮುವೇಲನು 22 : 7 (KNV)
ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
2 ಸಮುವೇಲನು 22 : 8 (KNV)
ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
2 ಸಮುವೇಲನು 22 : 9 (KNV)
ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
2 ಸಮುವೇಲನು 22 : 10 (KNV)
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
2 ಸಮುವೇಲನು 22 : 11 (KNV)
ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.
2 ಸಮುವೇಲನು 22 : 12 (KNV)
ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
2 ಸಮುವೇಲನು 22 : 13 (KNV)
ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.
2 ಸಮುವೇಲನು 22 : 14 (KNV)
ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
2 ಸಮುವೇಲನು 22 : 15 (KNV)
ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
2 ಸಮುವೇಲನು 22 : 16 (KNV)
ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
2 ಸಮುವೇಲನು 22 : 17 (KNV)
ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.
2 ಸಮುವೇಲನು 22 : 18 (KNV)
ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;
2 ಸಮುವೇಲನು 22 : 19 (KNV)
ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.
2 ಸಮುವೇಲನು 22 : 20 (KNV)
ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.
2 ಸಮುವೇಲನು 22 : 21 (KNV)
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು.
2 ಸಮುವೇಲನು 22 : 22 (KNV)
ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ.
2 ಸಮುವೇಲನು 22 : 23 (KNV)
ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ.
2 ಸಮುವೇಲನು 22 : 24 (KNV)
ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
2 ಸಮುವೇಲನು 22 : 25 (KNV)
ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.
2 ಸಮುವೇಲನು 22 : 26 (KNV)
ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
2 ಸಮುವೇಲನು 22 : 27 (KNV)
ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
2 ಸಮುವೇಲನು 22 : 28 (KNV)
ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.
2 ಸಮುವೇಲನು 22 : 29 (KNV)
ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
2 ಸಮುವೇಲನು 22 : 30 (KNV)
ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
2 ಸಮುವೇಲನು 22 : 31 (KNV)
ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.
2 ಸಮುವೇಲನು 22 : 32 (KNV)
ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
2 ಸಮುವೇಲನು 22 : 33 (KNV)
ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
2 ಸಮುವೇಲನು 22 : 34 (KNV)
ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
2 ಸಮುವೇಲನು 22 : 35 (KNV)
ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
2 ಸಮುವೇಲನು 22 : 36 (KNV)
ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.
2 ಸಮುವೇಲನು 22 : 37 (KNV)
ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.
2 ಸಮುವೇಲನು 22 : 38 (KNV)
ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.
2 ಸಮುವೇಲನು 22 : 39 (KNV)
ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು.
2 ಸಮುವೇಲನು 22 : 40 (KNV)
ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.
2 ಸಮುವೇಲನು 22 : 41 (KNV)
ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
2 ಸಮುವೇಲನು 22 : 42 (KNV)
ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.
2 ಸಮುವೇಲನು 22 : 43 (KNV)
ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
2 ಸಮುವೇಲನು 22 : 44 (KNV)
ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
2 ಸಮುವೇಲನು 22 : 45 (KNV)
ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
2 ಸಮುವೇಲನು 22 : 46 (KNV)
ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
2 ಸಮುವೇಲನು 22 : 47 (KNV)
ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
2 ಸಮುವೇಲನು 22 : 48 (KNV)
ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
2 ಸಮುವೇಲನು 22 : 49 (KNV)
ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
2 ಸಮುವೇಲನು 22 : 50 (KNV)
ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
2 ಸಮುವೇಲನು 22 : 51 (KNV)
ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51

BG:

Opacity:

Color:


Size:


Font: