2 ಸಮುವೇಲನು 5 : 1 (KNV)
ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
2 ಸಮುವೇಲನು 5 : 2 (KNV)
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
2 ಸಮುವೇಲನು 5 : 3 (KNV)
ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
2 ಸಮುವೇಲನು 5 : 4 (KNV)
ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
2 ಸಮುವೇಲನು 5 : 5 (KNV)
ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
2 ಸಮುವೇಲನು 5 : 6 (KNV)
ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
2 ಸಮುವೇಲನು 5 : 7 (KNV)
ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
2 ಸಮುವೇಲನು 5 : 8 (KNV)
ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
2 ಸಮುವೇಲನು 5 : 9 (KNV)
ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
2 ಸಮುವೇಲನು 5 : 10 (KNV)
ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
2 ಸಮುವೇಲನು 5 : 11 (KNV)
ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
2 ಸಮುವೇಲನು 5 : 12 (KNV)
ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
2 ಸಮುವೇಲನು 5 : 13 (KNV)
ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
2 ಸಮುವೇಲನು 5 : 14 (KNV)
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
2 ಸಮುವೇಲನು 5 : 15 (KNV)
ಸೊಲೊಮೋನ್ ಇಬ್ಹಾರ್
2 ಸಮುವೇಲನು 5 : 16 (KNV)
ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
2 ಸಮುವೇಲನು 5 : 17 (KNV)
ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
2 ಸಮುವೇಲನು 5 : 18 (KNV)
ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
2 ಸಮುವೇಲನು 5 : 19 (KNV)
ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
2 ಸಮುವೇಲನು 5 : 20 (KNV)
ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
2 ಸಮುವೇಲನು 5 : 21 (KNV)
ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
2 ಸಮುವೇಲನು 5 : 22 (KNV)
ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
2 ಸಮುವೇಲನು 5 : 23 (KNV)
ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
2 ಸಮುವೇಲನು 5 : 24 (KNV)
ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.
2 ಸಮುವೇಲನು 5 : 25 (KNV)
ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
❮
❯