1 ಅರಸುಗಳು 4 : 1 (KNV)
ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
1 ಅರಸುಗಳು 4 : 2 (KNV)
ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
1 ಅರಸುಗಳು 4 : 3 (KNV)
ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
1 ಅರಸುಗಳು 4 : 4 (KNV)
ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
1 ಅರಸುಗಳು 4 : 5 (KNV)
ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
1 ಅರಸುಗಳು 4 : 6 (KNV)
ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
1 ಅರಸುಗಳು 4 : 7 (KNV)
ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
1 ಅರಸುಗಳು 4 : 8 (KNV)
ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;
1 ಅರಸುಗಳು 4 : 9 (KNV)
ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್,
1 ಅರಸುಗಳು 4 : 10 (KNV)
ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು.
1 ಅರಸುಗಳು 4 : 11 (KNV)
ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
1 ಅರಸುಗಳು 4 : 12 (KNV)
ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
1 ಅರಸುಗಳು 4 : 13 (KNV)
ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
1 ಅರಸುಗಳು 4 : 14 (KNV)
ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.
1 ಅರಸುಗಳು 4 : 15 (KNV)
ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
1 ಅರಸುಗಳು 4 : 16 (KNV)
ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
1 ಅರಸುಗಳು 4 : 17 (KNV)
ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು;
1 ಅರಸುಗಳು 4 : 18 (KNV)
ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು.
1 ಅರಸುಗಳು 4 : 19 (KNV)
ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
1 ಅರಸುಗಳು 4 : 20 (KNV)
ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
1 ಅರಸುಗಳು 4 : 21 (KNV)
ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
1 ಅರಸುಗಳು 4 : 22 (KNV)
ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
1 ಅರಸುಗಳು 4 : 23 (KNV)
ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
1 ಅರಸುಗಳು 4 : 24 (KNV)
ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
1 ಅರಸುಗಳು 4 : 25 (KNV)
ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
1 ಅರಸುಗಳು 4 : 26 (KNV)
ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
1 ಅರಸುಗಳು 4 : 27 (KNV)
ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
1 ಅರಸುಗಳು 4 : 28 (KNV)
ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
1 ಅರಸುಗಳು 4 : 29 (KNV)
ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
1 ಅರಸುಗಳು 4 : 30 (KNV)
ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
1 ಅರಸುಗಳು 4 : 31 (KNV)
ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
1 ಅರಸುಗಳು 4 : 32 (KNV)
ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
1 ಅರಸುಗಳು 4 : 33 (KNV)
ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.
1 ಅರಸುಗಳು 4 : 34 (KNV)
ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
❮
❯