1 ಅರಸುಗಳು 6 : 1 (KNV)
ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
1 ಅರಸುಗಳು 6 : 2 (KNV)
ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
1 ಅರಸುಗಳು 6 : 3 (KNV)
ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
1 ಅರಸುಗಳು 6 : 4 (KNV)
ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
1 ಅರಸುಗಳು 6 : 5 (KNV)
ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
1 ಅರಸುಗಳು 6 : 6 (KNV)
ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
1 ಅರಸುಗಳು 6 : 7 (KNV)
ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
1 ಅರಸುಗಳು 6 : 8 (KNV)
ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು.
1 ಅರಸುಗಳು 6 : 9 (KNV)
ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.
1 ಅರಸುಗಳು 6 : 10 (KNV)
ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.
1 ಅರಸುಗಳು 6 : 11 (KNV)
ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ--
1 ಅರಸುಗಳು 6 : 12 (KNV)
ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
1 ಅರಸುಗಳು 6 : 13 (KNV)
ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
1 ಅರಸುಗಳು 6 : 14 (KNV)
ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು.
1 ಅರಸುಗಳು 6 : 15 (KNV)
ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
1 ಅರಸುಗಳು 6 : 16 (KNV)
ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
1 ಅರಸುಗಳು 6 : 17 (KNV)
ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು.
1 ಅರಸುಗಳು 6 : 18 (KNV)
ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
1 ಅರಸುಗಳು 6 : 19 (KNV)
ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
1 ಅರಸುಗಳು 6 : 20 (KNV)
ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
1 ಅರಸುಗಳು 6 : 21 (KNV)
ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
1 ಅರಸುಗಳು 6 : 22 (KNV)
ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
1 ಅರಸುಗಳು 6 : 23 (KNV)
ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
1 ಅರಸುಗಳು 6 : 24 (KNV)
ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
1 ಅರಸುಗಳು 6 : 25 (KNV)
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
1 ಅರಸುಗಳು 6 : 26 (KNV)
ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು.
1 ಅರಸುಗಳು 6 : 27 (KNV)
ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
1 ಅರಸುಗಳು 6 : 28 (KNV)
ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು.
1 ಅರಸುಗಳು 6 : 29 (KNV)
ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
1 ಅರಸುಗಳು 6 : 30 (KNV)
ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
1 ಅರಸುಗಳು 6 : 31 (KNV)
ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
1 ಅರಸುಗಳು 6 : 32 (KNV)
ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
1 ಅರಸುಗಳು 6 : 33 (KNV)
ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.
1 ಅರಸುಗಳು 6 : 34 (KNV)
ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
1 ಅರಸುಗಳು 6 : 35 (KNV)
ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
1 ಅರಸುಗಳು 6 : 36 (KNV)
ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
1 ಅರಸುಗಳು 6 : 37 (KNV)
ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.
1 ಅರಸುಗಳು 6 : 38 (KNV)
ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38