1 ಅರಸುಗಳು 7 : 1 (KNV)
ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.
1 ಅರಸುಗಳು 7 : 2 (KNV)
ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.
1 ಅರಸುಗಳು 7 : 3 (KNV)
ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.
1 ಅರಸುಗಳು 7 : 4 (KNV)
ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
1 ಅರಸುಗಳು 7 : 5 (KNV)
ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
1 ಅರಸುಗಳು 7 : 6 (KNV)
ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.
1 ಅರಸುಗಳು 7 : 7 (KNV)
ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.
1 ಅರಸುಗಳು 7 : 8 (KNV)
ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.
1 ಅರಸುಗಳು 7 : 9 (KNV)
ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
1 ಅರಸುಗಳು 7 : 10 (KNV)
ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.
1 ಅರಸುಗಳು 7 : 11 (KNV)
ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.
1 ಅರಸುಗಳು 7 : 12 (KNV)
ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
1 ಅರಸುಗಳು 7 : 13 (KNV)
ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
1 ಅರಸುಗಳು 7 : 14 (KNV)
ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
1 ಅರಸುಗಳು 7 : 15 (KNV)
ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
1 ಅರಸುಗಳು 7 : 16 (KNV)
ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
1 ಅರಸುಗಳು 7 : 17 (KNV)
ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
1 ಅರಸುಗಳು 7 : 18 (KNV)
ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
1 ಅರಸುಗಳು 7 : 19 (KNV)
ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.
1 ಅರಸುಗಳು 7 : 20 (KNV)
ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
1 ಅರಸುಗಳು 7 : 21 (KNV)
ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
1 ಅರಸುಗಳು 7 : 22 (KNV)
ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
1 ಅರಸುಗಳು 7 : 23 (KNV)
ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
1 ಅರಸುಗಳು 7 : 24 (KNV)
ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
1 ಅರಸುಗಳು 7 : 25 (KNV)
ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
1 ಅರಸುಗಳು 7 : 26 (KNV)
ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
1 ಅರಸುಗಳು 7 : 27 (KNV)
ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.
1 ಅರಸುಗಳು 7 : 28 (KNV)
ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.
1 ಅರಸುಗಳು 7 : 29 (KNV)
ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
1 ಅರಸುಗಳು 7 : 30 (KNV)
ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.
1 ಅರಸುಗಳು 7 : 31 (KNV)
ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು.
1 ಅರಸುಗಳು 7 : 32 (KNV)
ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.
1 ಅರಸುಗಳು 7 : 33 (KNV)
ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು.
1 ಅರಸುಗಳು 7 : 34 (KNV)
ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.
1 ಅರಸುಗಳು 7 : 35 (KNV)
ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.
1 ಅರಸುಗಳು 7 : 36 (KNV)
ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
1 ಅರಸುಗಳು 7 : 37 (KNV)
ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.
1 ಅರಸುಗಳು 7 : 38 (KNV)
ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
1 ಅರಸುಗಳು 7 : 39 (KNV)
ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.
1 ಅರಸುಗಳು 7 : 40 (KNV)
ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
1 ಅರಸುಗಳು 7 : 41 (KNV)
ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
1 ಅರಸುಗಳು 7 : 42 (KNV)
ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ
1 ಅರಸುಗಳು 7 : 43 (KNV)
ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ
1 ಅರಸುಗಳು 7 : 44 (KNV)
ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.
1 ಅರಸುಗಳು 7 : 45 (KNV)
ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
1 ಅರಸುಗಳು 7 : 46 (KNV)
ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
1 ಅರಸುಗಳು 7 : 47 (KNV)
ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
1 ಅರಸುಗಳು 7 : 48 (KNV)
ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
1 ಅರಸುಗಳು 7 : 49 (KNV)
ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,
1 ಅರಸುಗಳು 7 : 50 (KNV)
ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.
1 ಅರಸುಗಳು 7 : 51 (KNV)
ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
❮
❯