ಕೀರ್ತನೆಗಳು 100 : 1 (KNV)
ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
ಕೀರ್ತನೆಗಳು 100 : 2 (KNV)
ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
ಕೀರ್ತನೆಗಳು 100 : 3 (KNV)
ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
ಕೀರ್ತನೆಗಳು 100 : 4 (KNV)
ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.
ಕೀರ್ತನೆಗಳು 100 : 5 (KNV)
ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
❮
❯