ಕೀರ್ತನೆಗಳು 105 : 1 (KNV)
ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
ಕೀರ್ತನೆಗಳು 105 : 2 (KNV)
ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
ಕೀರ್ತನೆಗಳು 105 : 3 (KNV)
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
ಕೀರ್ತನೆಗಳು 105 : 4 (KNV)
ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
ಕೀರ್ತನೆಗಳು 105 : 5 (KNV)
ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
ಕೀರ್ತನೆಗಳು 105 : 6 (KNV)
ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
ಕೀರ್ತನೆಗಳು 105 : 7 (KNV)
ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
ಕೀರ್ತನೆಗಳು 105 : 8 (KNV)
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
ಕೀರ್ತನೆಗಳು 105 : 9 (KNV)
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
ಕೀರ್ತನೆಗಳು 105 : 10 (KNV)
ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
ಕೀರ್ತನೆಗಳು 105 : 11 (KNV)
ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
ಕೀರ್ತನೆಗಳು 105 : 12 (KNV)
ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
ಕೀರ್ತನೆಗಳು 105 : 13 (KNV)
ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
ಕೀರ್ತನೆಗಳು 105 : 14 (KNV)
ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
ಕೀರ್ತನೆಗಳು 105 : 15 (KNV)
ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
ಕೀರ್ತನೆಗಳು 105 : 16 (KNV)
ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
ಕೀರ್ತನೆಗಳು 105 : 17 (KNV)
ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
ಕೀರ್ತನೆಗಳು 105 : 18 (KNV)
ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
ಕೀರ್ತನೆಗಳು 105 : 19 (KNV)
ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
ಕೀರ್ತನೆಗಳು 105 : 20 (KNV)
ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
ಕೀರ್ತನೆಗಳು 105 : 21 (KNV)
ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
ಕೀರ್ತನೆಗಳು 105 : 22 (KNV)
ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
ಕೀರ್ತನೆಗಳು 105 : 23 (KNV)
ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
ಕೀರ್ತನೆಗಳು 105 : 24 (KNV)
ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
ಕೀರ್ತನೆಗಳು 105 : 25 (KNV)
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
ಕೀರ್ತನೆಗಳು 105 : 26 (KNV)
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
ಕೀರ್ತನೆಗಳು 105 : 27 (KNV)
ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
ಕೀರ್ತನೆಗಳು 105 : 28 (KNV)
ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
ಕೀರ್ತನೆಗಳು 105 : 29 (KNV)
ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
ಕೀರ್ತನೆಗಳು 105 : 30 (KNV)
ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
ಕೀರ್ತನೆಗಳು 105 : 31 (KNV)
ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
ಕೀರ್ತನೆಗಳು 105 : 32 (KNV)
ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.
ಕೀರ್ತನೆಗಳು 105 : 33 (KNV)
ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
ಕೀರ್ತನೆಗಳು 105 : 34 (KNV)
ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
ಕೀರ್ತನೆಗಳು 105 : 35 (KNV)
ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.
ಕೀರ್ತನೆಗಳು 105 : 36 (KNV)
ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
ಕೀರ್ತನೆಗಳು 105 : 37 (KNV)
ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
ಕೀರ್ತನೆಗಳು 105 : 38 (KNV)
ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
ಕೀರ್ತನೆಗಳು 105 : 39 (KNV)
ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
ಕೀರ್ತನೆಗಳು 105 : 40 (KNV)
ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
ಕೀರ್ತನೆಗಳು 105 : 41 (KNV)
ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
ಕೀರ್ತನೆಗಳು 105 : 42 (KNV)
ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
ಕೀರ್ತನೆಗಳು 105 : 43 (KNV)
ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,
ಕೀರ್ತನೆಗಳು 105 : 44 (KNV)
ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.
ಕೀರ್ತನೆಗಳು 105 : 45 (KNV)
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45